Rishabh Shetty: ಕಾಂತಾರ ಸ್ಟಾರ್ ರಿಷಬ್ ಶೆಟ್ಟಿಗೆ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ

ಕಾಂತಾರ ಸಿನಿಮಾ ಸಿನಿ ಜಗತ್ತನ್ನೇ ತಿರುಗಿ ನೋಡುವಂತೆ ಮಾಡಿದ ಡಿವೈನ್‌ ಸ್ಟಾರ್‌ ರಿಷಬ್ ಶೆಟ್ಟಿಗೆ ಮತ್ತೊಂದು ಪ್ರಶಸ್ತಿಯ ಗರಿ ಮುಡಿಗೇರಿದೆ.
 

Share this Video
  • FB
  • Linkdin
  • Whatsapp

ಡಿವೈನ್‌ ಸ್ಟಾರ್‌ ರಿಷಬ್ ಶೆಟ್ಟಿ ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದಾದಾ ಸಾಹೇಬ್‌ ಪಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ರಿಷಬ್ ಶೆಟ್ಟಿ ಭಾಜನರಾಗಿದ್ದು, ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ಪ್ರಶಸ್ತಿ ಲಭ್ಯವಾಗಿದೆ. ಫೆ 20ರಂದು ಮುಂಬೈನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಕಾಂತಾರ ಮೂಲಕ ವಿಶ್ವದ ಮನ್ನಣೆ ಪಡೆದ ರಿಷಬ್‌ ಶೆಟ್ಟಿ ತಾಜ್‌ ಲ್ಯಾಂಡ್‌ ಎಂಡ್ ಹೋಟೆಲ್‌'ನಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Related Video