James 2022: ಕರ್ನಾಟಕದ 400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ 'ಜೇಮ್ಸ್' ದರ್ಶನ

ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬದಂದೇ 'ಜೇಮ್ಸ್‌' ಸಿನಿಮಾ ತೆರೆ ಕಾಣಲಿದೆ. ರಾಜ್ಯಾದ್ಯಂತ ಎಲ್ಲ ಚಿತ್ರಮಂದಿರಗಳಲ್ಲಿ 'ಜೇಮ್ಸ್' ಚಿತ್ರ ಬಿಡುಗಡೆಯಾಗಲಿದ್ದು, ಸುಮಾರು 400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ 'ಜೇಮ್ಸ್‌' ದರ್ಶನವಾಗಲಿದೆ.

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ನ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಹುಟ್ಟುಹಬ್ಬದಂದೇ 'ಜೇಮ್ಸ್‌' (James) ಸಿನಿಮಾ ತೆರೆ ಕಾಣಲಿದೆ. ರಾಜ್ಯಾದ್ಯಂತ ಎಲ್ಲ ಚಿತ್ರಮಂದಿರಗಳಲ್ಲಿ 'ಜೇಮ್ಸ್' ಚಿತ್ರ ಬಿಡುಗಡೆಯಾಗಲಿದ್ದು, ಸುಮಾರು 400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ 'ಜೇಮ್ಸ್‌' ದರ್ಶನವಾಗಲಿದೆ. 150ಕ್ಕೂ ಹೆಚ್ಚು ಮಲ್ಟಿಪ್ಲೆಕ್ಸ್‌ ಸ್ಕ್ರೀನ್‌ಗಳಲ್ಲಿ 'ಜೇಮ್ಸ್' ಅಬ್ಬರ ಶುರುವಾಗುತ್ತದೆ. ನಾಳೆ ಬೆಳಗ್ಗೆ 6 ಗಂಟೆಯಿಂದಲೇ ಚಿತ್ರದ ಶೋ ಆರಂಭವಾಗಲಿದೆ. ಈಗಾಗಲೇ ಚಿತ್ರದ ಮೊದಲ ದಿನದ ಟಿಕೆಟ್‌ಗಳು ಸೋಲ್ಡೌಟ್ ಆಗಿವೆ. ವಿಶೇಷವಾಗಿ ನಾಳೆ ರಾಜ್ಯದ ಎಲ್ಲ ಬಹುತೇಕ ಚಿತ್ರಮಂದಿರಗಳು ಹೌಸ್‌ಫುಲ್ ಪ್ರದರ್ಶನವನ್ನು ಕಾಣಲಿವೆ. ಬೆಂಗಳೂರುವೊಂದರಲ್ಲೇ 800ಕ್ಕೂ ಹೆಚ್ಚಿನ ಶೋ ಪ್ರದರ್ಶನ ಕಾಣುತ್ತದೆ. ಕರ್ನಾಟಕದಾದ್ಯಂತ ಒಟ್ಟು 1700 ಶೋಗಳು ಇರುತ್ತವೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

Related Video