Kireeti Reddy: ಅದ್ಧೂರಿಯಾಗಿ ನೆರವೇರಿದ ಜನಾರ್ಧನ ರೆಡ್ಡಿ ಪತ್ರನ ಸಿನಿಮಾ ಮುಹೂರ್ತ!

ಮಾಜಿ ಸಚಿವ ಜನಾರ್ದನ ರೆಡ್ಡಿ ಸುಪುತ್ರ ಕಿರೀಟಿ ಅದ್ಧೂರಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಬಾಹುಬಲಿ ನಿರ್ದೇಶಕ ಎಸ್ಎಸ್ ರಾಜಮೌಳಿಯ ಅಭಯ ಹಸ್ತದಿಂದ ಕಿರೀಟಿ ಚೊಚ್ಚಲ ಚಿತ್ರಕ್ಕೆ ಆರಂಭ ಸಿಕ್ಕಿದೆ.

Share this Video
  • FB
  • Linkdin
  • Whatsapp

ಮಾಜಿ ಸಚಿವ ಜನಾರ್ದನ ರೆಡ್ಡಿ (Janardhana Reddy) ಸುಪುತ್ರ ಕಿರೀಟಿ (Kireeti Reddy) ಅದ್ಧೂರಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಬಾಹುಬಲಿ ನಿರ್ದೇಶಕ ಎಸ್ಎಸ್ ರಾಜಮೌಳಿಯ (SS Rajamouli) ಅಭಯ ಹಸ್ತದಿಂದ ಕಿರೀಟಿ ಚೊಚ್ಚಲ ಚಿತ್ರಕ್ಕೆ ಆರಂಭ ಸಿಕ್ಕಿದೆ. ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್ ಮುಖ್, ಶ್ರೀಲೀಲಾ ಸೇರಿದಂತೆ ದೊಡ್ಡ ತಾರಾಬಳಗವೇ ನಟಿಸಲಿರುವ ಈ ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನೆರವೇರಿದೆ. 'ವಾರಾಹಿ ಫಿಲ್ಮಂ ಪ್ರೊಡಕ್ಷನ್' ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ರಾಧಾ ಕೃಷ್ಣ (Radha Krishna) ನಿರ್ದೇಶನದಲ್ಲಿ ತೆಲುಗು-ಕನ್ನಡ ಭಾಷೆಯಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಳ್ಳಿತೆರೆಗೆ ಎಂಟ್ರಿ ಕೊಡಲು ಸಜ್ಜಾದ ಜನಾರ್ದನ ರೆಡ್ಡಿ ಪುತ್ರ Kireeti

ಕಿರೀಟಿ ಚೊಚ್ಚಲ ಸಿನಿಮಾಗೆ ಕ್ಲ್ಯಾಪ್ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ ರಾಜಮೌಳಿ ಹೀರೋ ಇಂಟ್ರೂಡಕ್ಷನ್ ಟೀಸರ್ (Teaser) ನೋಡಿ ಕಿರೀಟಿ ಬೆನ್ನುತಟ್ಟಿದರು. ನನಗೆ ಪ್ರಾಮಿಸಿಂಗ್ ಆಗಿರುವ ಯುವ ಪ್ರತಿಭೆಯನ್ನು ಲಾಂಚ್ ಮಾಡುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಇವರು ನಟನೆ, ಡ್ಯಾನ್ಸ್, ಸ್ಟಂಟ್ಸ್ ಎಲ್ಲವನ್ನು ಮಾಡುತ್ತಾರೆ. ಇದೇ ಸಂದರ್ಭದಲ್ಲಿ ಯುವ ಪ್ರತಿಭೆಗೆ ಒಳ್ಳೆ ಲಾಂಚ್ ಕೂಡಬೇಕು. ಈ ಪ್ರತಿಭೆ ಈಗ ಅದ್ಭುತ ಕೈಗಳ ಜೊತೆ ಸೇರಿಕೊಂಡಿದೆ. ಅದಕ್ಕೆ ಖುಷಿಯಾಗುತ್ತಿದೆ ಎಂದು ರಾಜಮೌಳಿ ಹೇಳಿದರು. ಮಾತ್ರವಲ್ಲದೇ ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್ ಮುಖ್ ಹಾಗೂ ಶ್ರೀಲೀಲಾ ಚಿತ್ರದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡರು.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

Related Video