Dhruva Sarja: ಮಾರ್ಟಿನ್‌ ಚಿತ್ರದ ಪಾತ್ರಕ್ಕೆ ಕಸರತ್ತು ನಡೆಸುತ್ತಿರುವ ಆಕ್ಷನ್ ಪ್ರಿನ್ಸ್

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ 'ಪೊಗರು' ಚಿತ್ರದ ನಂತರ 'ಮಾರ್ಟಿನ್' ಚಿತ್ರದಲ್ಲಿ ನಟಿಸುತ್ತಿದ್ದು, ನಿರ್ದೇಶಕ ಎ.ಪಿ ಅರ್ಜುನ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದಲ್ಲಿ ಧ್ರುವ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ದ್ವಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಪಾತ್ರಕ್ಕಾಗಿ ಅವರು ಜಿಮ್‌ನಲ್ಲಿ ಫುಲ್​ ವರ್ಕೌಟ್ ಮಾಡುತ್ತಿದ್ದಾರೆ. 

Share this Video
  • FB
  • Linkdin
  • Whatsapp

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) 'ಪೊಗರು' (Pogaru) ಚಿತ್ರದ ನಂತರ 'ಮಾರ್ಟಿನ್' (Martin) ಚಿತ್ರದಲ್ಲಿ ನಟಿಸುತ್ತಿದ್ದು, ನಿರ್ದೇಶಕ ಎ.ಪಿ ಅರ್ಜುನ್ (A.P.Arjun) ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದಲ್ಲಿ ಧ್ರುವ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ದ್ವಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಪಾತ್ರಕ್ಕಾಗಿ ಅವರು ಜಿಮ್‌ನಲ್ಲಿ ಫುಲ್​ ವರ್ಕೌಟ್ ಮಾಡುತ್ತಿದ್ದಾರೆ. ಈಗಾಗಲೇ ಹುರಿಗಟ್ಟಿದ ದೈತ್ಯ ದೇಹ ಹೊಂದಿರುವ ಧ್ರುವ ಯೋಧನ ಪಾತ್ರಕ್ಕೆ ಸಖತ್ ಕಸರತ್ತು ನಡೆಸುತ್ತಿದ್ದಾರೆ. 

Wedding Anniversary: ಪತ್ನಿ ಪ್ರೇರಣಾಗೆ ಸ್ಪೆಷಲ್ ವಿಶ್ ಮಾಡಿದ ಧ್ರುವ ಸರ್ಜಾ!

ಇತ್ತೀಚೆಗೆ ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೋವನ್ನು ಧ್ರುವ ಸರ್ಜಾ ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಹಂಚಿಕೊಂಡಿದ್ದಾರೆ. ಭಾರಿ ಗಾತ್ರದ ಡಂಬಲ್ಸ್ ಅನ್ನು ಧ್ರುವ ಸರ್ಜಾ ಸರಾಗವಾಗಿ ಎತ್ತುತ್ತಿದ್ದಾರೆ. 'ಮಾರ್ಟಿನ್' ಚಿತ್ರಕ್ಕೆ ನಾಯಕಿಯಾಗಿ ನಟಿ ವೈಭವಿ ಶಾಂಡಿಲ್ಯ (Vaibhavi Shandilya) ಆಯ್ಕೆಯಾಗಿದ್ದು, ಉದಯ್ ಕೆ.ಮೆಹ್ತಾ (Uday K.Mehta) ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಈಗಾಗಲೇ 'ಮಾರ್ಟಿನ್' ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿದಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video