Asianet Suvarna News Asianet Suvarna News

Rider Movie: ಬನ್ನೂರಿನ ಚಿತ್ರಮಂದಿರಕ್ಕೆ ಭೇಟಿ ಕೊಟ್ಟ ನಿಖಿಲ್ ಕುಮಾರ್‌

ಸ್ಯಾಂಡಲ್‌ವುಡ್‌ನ ಯುವರಾಜ, ರಾಜಕಾರಣಿ ನಿಖಿಲ್ ಕುಮಾರ್ ಅವರ 'ರೈಡರ್' ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರ ವೀಕ್ಷಿಸಿದ ಅಭಿಮಾನಿಗಳಿಂದ ಅತ್ತ್ಯುತ್ತಮ ಪ್ರಶಂಸೆ ಹಾಗೂ ಒಳ್ಳೆಯ ಪ್ರತಿಕ್ರಿಯೆಗಳು ಬರುತ್ತಿವೆ. 

ಸ್ಯಾಂಡಲ್‌ವುಡ್‌ನ (Sandalwood) ಯುವರಾಜ, ರಾಜಕಾರಣಿ ನಿಖಿಲ್ ಕುಮಾರ್ (Nikhil Kumar) ಅವರ 'ರೈಡರ್' (Rider) ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರ ವೀಕ್ಷಿಸಿದ ಅಭಿಮಾನಿಗಳಿಂದ ಅತ್ತ್ಯುತ್ತಮ ಪ್ರಶಂಸೆ ಹಾಗೂ ಒಳ್ಳೆಯ ಪ್ರತಿಕ್ರಿಯೆಗಳು ಬರುತ್ತಿವೆ. ಈ ಹಿನ್ನಲೆಯಲ್ಲಿ ನಿಖಿಲ್‌ ಎಲ್ಲೆಡೆ ಚಿತ್ರಮಂದಿರಗಳಿಗೆ ವಿಸಿಟ್ ನೀಡುತ್ತಿದ್ದು, ಬನ್ನೂರಿನ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದಾರೆ. ಇದು ನಿಖಿಲ್ ಅಭಿಮಾನಿಗಳಿಗೆ ಸಂತಸ ನೀಡಿದ್ದು, ಜೈಕಾರ ಕೂಗಿದ್ದಾರೆ. ಜೊತೆಗೆ ನಿಖಿಲ್‌ಗೆ ಭರ್ಜರಿ ಸ್ವಾಗತ ನೀಡಿ, ಶಿಳ್ಳೆ ಚಪ್ಪಾಳೆ ಹೊಡೆದು ಸಂಭ್ರಮಿಸಿದ್ದಾರೆ.

Rider Response: ನಿಖಿಲ್ ಕುಮಾರಸ್ವಾಮಿ 'ರೈಡರ್' ಸಿನಿಮಾ ಹೇಗಿದೆಯಂತೆ ಗೊತ್ತಾ?

'ರೈಡರ್' ಚಿತ್ರಕ್ಕೆ ವಿಜಯ್​ ಕುಮಾರ್​ ಕೊಂಡ (Vijay Kumar Konda) ಅವರು ಆ್ಯಕ್ಷನ್​ ಕಟ್​ ಹೇಳಿದ್ದು, ಕಾಶ್ಮೀರಿ ಪರ್ದೇಸಿ (Kashmira Pardeshi) ನಿಖಿಲ್‌ಗೆ ಜೋಡಿಯಾಗಿದ್ದಾರೆ. ದತ್ತಣ್ಣ, ಗರುಡ ರಾಮ್, ಚಿಕ್ಕಣ್ಣ, ಶೋಭರಾಜ್, ರಾಜೇಶ್ ನಟರಂಗ, ಶಿವರಾಜ್.ಕೆ.ಆರ್.ಪೇಟೆ, ಬಿಗ್​ ಬಾಸ್​ ವಿನ್ನರ್​ ಮಂಜು ಪಾವಗಡ, ಸಂಪದ ಹುಲಿವಾನ, ನಿಹಾರಿಕ ಸೇರಿದಂತೆ ದೊಡ್ಡ ತಾರಬಳಗ ಚಿತ್ರದಲ್ಲಿದೆ. ಇನ್ನು ಈ ಸಿನಿಮಾವನ್ನು ಪೈರಸಿ (Piracy) ಮಾಡಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಿರ್ಮಾಪಕ ಲಹರಿ ವೇಲು ಇತ್ತೀಚೆಗೆ ಸೈಬರ್‌ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Video Top Stories