Bhajarangi 2: ಅಭಿಮಾನಿಗಳ ಜೊತೆ ಚಿತ್ರ ವೀಕ್ಷಿಸಿದ ಶಿವರಾಜ್ ಕುಮಾರ್

ಸ್ಯಾಂಡಲ್​ವುಡ್‌ನ ಕರುನಾಡ ಚಕ್ರವರ್ತಿ  ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ಭಜರಂಗಿ 2 ಚಿತ್ರ ಬಿಡುಗಡೆಯಾಗಿ ಸಿನಿರಸಿಕರಿಂದ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹೀಗಾಗಿ ಇಂದು ಶಿವರಾಜ್​ಕುಮಾರ್ ಅಭಿಮಾನಿಗಳೊಂದಿಗೆ ಗಾಂಧಿನಗರದ ಅನುಪಮಾ ಚಿತ್ರಮಂದಿರದಲ್ಲಿ ಭಜರಂಗಿ 2 ಸಿನಿಮಾ ವೀಕ್ಷಿಸಿದ್ದಾರೆ. 

Share this Video
  • FB
  • Linkdin
  • Whatsapp

ಸ್ಯಾಂಡಲ್​ವುಡ್‌ನ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ (Shivarajkumar) ಅಭಿನಯದ ಬಹುನಿರೀಕ್ಷಿತ 'ಭಜರಂಗಿ 2' (Bhajarangi 2) ಚಿತ್ರ ಬಿಡುಗಡೆಯಾಗಿ ಸಿನಿರಸಿಕರಿಂದ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಚಿತ್ರ ರಿಲೀಸ್​ ಆದ ದಿನವೇ ಪುನೀತ್ ರಾಜ್​ಕುಮಾರ್ ( Puneeth Rajkumar) ನಿಧನದ ಸುದ್ದಿ ಎಲ್ಲರನ್ನೂ ದಿಗ್ಭ್ರಾಂತಿಗೊಳಿಸಿತ್ತು. ಹಾಗೂ ಅರ್ಧದಲ್ಲೇ ಚಿತ್ರಮಂದಿರಗಳಿಂದ ಪ್ರೇಕ್ಷಕರು ಹೊರಬಂದಿದ್ದರು. ಹೀಗಾಗಿ ಅಭಿಮಾನಿಗಳ ಜತೆ ಸಿನಿಮಾ ನೋಡೋಕೆ ಶಿವಣ್ಣನಿಗೆ ಸಾಧ್ಯವಾಗಿರಲಿಲ್ಲ. ಈ ಕಾರಣಕ್ಕೆ ಇಂದು ಶಿವರಾಜ್​ಕುಮಾರ್ ಅಭಿಮಾನಿಗಳೊಂದಿಗೆ (Fans) ಗಾಂಧಿನಗರದ ಅನುಪಮಾ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಿಸಿದ್ದಾರೆ. 

ಬೆಚ್ಚಿ ಬೀಳಿಸೋ Bhajarangi 2 ವಿಲನ್ ಮೇಕಿಂಗ್ ವಿಡಿಯೋ!

ಅಷ್ಟೇ ಅಲ್ಲ, ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ಮಾಡಿದ್ದಾರೆ. ಶಿವಣ್ಣನಿಗೆ ನಿರ್ದೇಶಕ ಎ.ಹರ್ಷ ಹಾಗೂ ಖಳನಾಯಕ ಚೆಲುವರಾಜು ಸಾಥ್ ನೀಡಿದ್ದಾರೆ. ಜಯಣ್ಣ-ಭೋಗೇಂದ್ರ ನಿರ್ಮಾಣದ ಈ ಚಿತ್ರಕ್ಕೆ ಎ.ಹರ್ಷ ಆಕ್ಷನ್ ಕಟ್ ಹೇಳಿದ್ದು,ಅರ್ಜುನ್‌ ಜನ್ಯಾ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದಲ್ಲಿ ಜಾಕಿ ಭಾವನಾ, ಸೌರವ್ ಲೋಕೇಶ್, ಹಿರಿಯ ನಟಿ ಶ್ರುತಿ, ಚೆಲುವ ರಾಜು, ಶಿವರಾಜ್ ಕೆ.ಆರ್.ಪೇಟೆ, ಕುರಿ ಪ್ರತಾಪ್ ಸೇರಿದಂತೆ ವಿಶೇಷವಾದ ತಾರಾಗಣವಿದೆ. ಅದ್ದೂರಿ ಮೇಕಿಂಗ್‌ ಜೊತೆಗೆ ಶಿವಣ್ಣನ ಲುಕ್‌ಗಳು ಭಿನ್ನವಾಗಿವೆ. ದೀಪು ಎಸ್‌. ಕುಮಾರ್‌ ಸಂಕಲನ, ಸ್ವಾಮಿ ಅವರ ಕ್ಯಾಮೆರಾ ಕೈಚಳಕ ಈ ಚಿತ್ರಕ್ಕಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video