Asianet Suvarna News Asianet Suvarna News

Shiva Rajkumar: ರೆಟ್ರೋ ಸ್ಟೈಲ್‌ನ ಮಾಸ್ ಸಿನಿಮಾದಲ್ಲಿ ಶಿವಣ್ಣ

ಕನ್ನಡ ಚಿತ್ರರಂಗದ ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹಿರೋ ಶಿವರಾಜ್‌ಕುಮಾರ್‌ (Shivarajkumar) ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ. ಈ ಚಿತ್ರವನ್ನು 'ಬುದ್ಧಿವಂತ 2' ನಿರ್ದೇಶಕ ಜಯರಾಂ ಅಲಿಯಾಸ್ ಆರ್‌ಜೈ ನಿರ್ದೇಶನ ಮಾಡುತ್ತಿದ್ದಾರೆ. 

ಕನ್ನಡ ಚಿತ್ರರಂಗದ ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹಿರೋ ಶಿವರಾಜ್‌ಕುಮಾರ್‌ (Shivarajkumar) ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ. ಈ ಚಿತ್ರವನ್ನು 'ಬುದ್ಧಿವಂತ 2' ನಿರ್ದೇಶಕ ಜಯರಾಂ ಅಲಿಯಾಸ್ ಆರ್‌ಜೈ (RJai) ನಿರ್ದೇಶನ ಮಾಡುತ್ತಿದ್ದಾರೆ. ಬಿಂದ್ಯಾ ಮೂವೀಸ್ ಸಂಸ್ಥೆ ಮೂಲಕ ಆರ್ ಕೇಶವ ರೈತ (R.Keshav) ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ ಇವರು 'ಲಕ ಲಕ ಲಂಬೋರ್ಗಿನಿ' ಎನ್ನುವ ವಿಡಿಯೋ ಆಲ್ಬಂ ನಿರ್ಮಿಸಿದ್ದಾರೆ.

Republic Day 2022: ಶಕ್ತಿಧಾಮದ ಮಕ್ಕಳೊಂದಿಗೆ ಗಣರಾಜ್ಯೋತ್ಸವ ಆಚರಿಸಿದ ಶಿವಣ್ಣ

'ಇದೊಂದು ಹೊಸ ರೀತಿಯ ಕತೆ. ಶಿವಣ್ಣ ಜತೆಗೆ ಈ ಹಿಂದೆ ನಾನು ಕೆಲಸ ಮಾಡಿದ್ದೇನೆ. ಆದರೆ, ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದೇನೆ. 1970ರ ಕಾಲಘಟ್ಟದಲ್ಲಿ ನಡೆಯುವ ರೆಟ್ರೊ ಶೈಲಿಯ ಕತೆಯಾಗಿರುವುದರಿಂದ ಗೆಟಪ್‌ಗಳ ವಿಶೇಷವಾಗಿರುತ್ತವೆ. ಕನ್ನಡದ ಜತೆಗೆ ಬೇರೆ ಬೇರೆ ಭಾಷೆಗಳಲ್ಲೂ ಈ ಸಿನಿಮಾ ಬಿಡುಗಡೆ ಆಗುತ್ತಿದೆ. ಮುಂದಿನ ತಿಂಗಳು ಮೋಷನ್ ಪೋಸ್ಟರ್ (Motion Poster) ಜತೆಗೆ ಚಿತ್ರಕ್ಕೆ ಅದ್ದೂರಿಯಾಗಿ ಮುಹೂರ್ತ ಮಾಡುವ ಪ್ಲಾನ್ ಮಾಡಿಕೊಂಡಿದ್ದೇವೆ' ಎನ್ನುತ್ತಾರೆ ಆರ್ ಜೈ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Video Top Stories