Asianet Suvarna News

ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ಅಧ್ಯಕ್ಷ ರಮೇಶ್ ಕಿಟ್ಟಿಗೆ ಬೆದರಿಕೆ ಕರೆ!

Jun 4, 2021, 2:14 PM IST

ಕೊರೋನಾ ಸಂಕಷ್ಟದಲ್ಲಿ ನಿರಂತರ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ನಟ ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ಅಧ್ಯಕ್ಷರಿಗೆ ಬೆದರಿಕೆ ಕರೆಗಳು ಬರುತ್ತಿದೆ. ಕೆಲವು ಕಿಡಿಗೇಡಿಗಳು ಒಂದೇ ದಿನ ಮೂರು ಮೊಬೈಲ್ ನಂಬರ್‌ಗಳಿಂದ ಮಧ್ಯರಾತ್ರಿ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ಸುದೀಪ್ ಚಾರಿಟೇಬಲ್ ಸೊಸೈಟಿ ಮಾಡುತ್ತಿರುವ ಕೆಲಸವನ್ನು ನಿಲ್ಲಿಸುವಂತೆ ಧಮಕಿ ಹಾಕುತ್ತಿದ್ದಾರೆ. ಬೆದರಿಕೆ ಕರೆಗಳ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ರಮೇಶ್ ಕಿಟ್ಟಿ ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment