ಅತ್ತಿಗೆಗೆ ಕಿರುಕುಳ ನೀಡಿದ ಆರೋಪ; ನಟಿ ಅಭಿನಯಾಗೆ 2 ವರ್ಷ ಜೈಲು ಶಿಕ್ಷೆ

ಅತ್ತಿಗೆಗೆ ವರದಕ್ಷಿಣಿ ಕಿರುಕುಳ ಕೊಟ್ಟ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟಿ ಅಭಿನಯಾ ಜೈಲು ಪಾಲಾಗಿದ್ದಾರೆ. 

Share this Video
  • FB
  • Linkdin
  • Whatsapp

ಅತ್ತಿಗೆಗೆ ವರದಕ್ಷಿಣಿ ಕಿರುಕುಳ ಕೊಟ್ಟ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟಿ ಅಭಿನಯಾ ಜೈಲು ಪಾಲಾಗಿದ್ದಾರೆ. ತನ್ನ ಅಣ್ಣ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮೀ ದೇವಿಗೆ ಕಿರುಕುಳ ಕೊಟ್ಟ ಆರೋಪದಡಿ ಶಿಕ್ಷೆ ಪ್ರಕಟವಾಗಿದೆ. ನಟಿ ಅಭಿನಯಾ ಅವರಿಗೆ ಹೈಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. 1998ರಲ್ಲಿ ಅಭಿನಯಾ ಅವರ ಅಣ್ಣ ಶ್ರೀನಿವಾಸ್ ಮತ್ತು ಲಕ್ಷ್ಮೀ ದೇವಿ ಅವರ ಮದುವೆಯಾಗಿತ್ತು. ಮದುವೆ ವೇಳೆ ವರದಕ್ಷಿಣೆ ವರದಕ್ಷಿಣೆ ಪಡೆದು ಪದೇ ಪದೇ ಹಣ ತರುವಂತೆ ಹಿಂಸೆ ಮಾಡುತ್ತಿದ್ದರು ಎಂದು 2002ರಲ್ಲಿ ಅತ್ತಿಗೆ ಲಕ್ಷ್ಮೀದೇವಿ ಅಭಿನಯಾ ಕುಟುಂಬದ ವಿರುದ್ಧ ದೂರು ನೀಡಿದ್ದರು. 2012ರಲ್ಲಿ ಮ್ಯಾಜಸ್ಟ್ರೇಟ್ ಕೋರ್ಟ್ ಆರೋಪಿಗಳಿಗೆ ಶಿಕ್ಷೆ ನೀಡಿತ್ತು. ಬಳಿಕ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ತೀರ್ಪು ಪ್ರಕಟಿಸಿದ್ದು ಶಿಕ್ಷೆ ವಿಧಿಸಿದೆ.

Related Video