Asianet Suvarna News Asianet Suvarna News

ಸಿಂಧು ಲೋಕನಾಥ್ ಸ್ಪೆಷಲ್ ಡಾನ್ಸ್, 'ಬೆಂಕಿ'ಗೆ ರಮ್ಯಾ ಸಾಥ್..!

ನಿರ್ದೇಶಕ ವಸಿಷ್ಠ ಬಂಟನೂರು ನಿರ್ದೇಶನದಲ್ಲಿ 1975 ಅನ್ನೋ ಸಿನಿಮಾ ತಯಾರಾಗಿದೆ. ಕ್ರೈಮ್ ಥ್ರಿಲ್ಲರ್ ಕಥಾ ಹಂದರದ ಈ ಸಿನಿಮಾದಲ್ಲಿ ಚಕ್ರವರ್ತಿ ಚಂದ್ರಚೂಡ್, ಜಯ್ ಶೆಟ್ಟಿ, ಮಾನಸ, ವೆಂಕಟೇಶ್ ಪ್ರಸಾದ್ ನಟಿಸಿದ್ದಾರೆ.


ನಿರ್ದೇಶಕ ವಸಿಷ್ಠ ಬಂಟನೂರು ನಿರ್ದೇಶನದಲ್ಲಿ 1975 ಅನ್ನೋ ಸಿನಿಮಾ ತಯಾರಾಗಿದೆ. ಕ್ರೈಮ್ ಥ್ರಿಲ್ಲರ್ ಕಥಾ ಹಂದರದ ಈ ಸಿನಿಮಾದಲ್ಲಿ ಚಕ್ರವರ್ತಿ ಚಂದ್ರಚೂಡ್, ಜಯ್ ಶೆಟ್ಟಿ, ಮಾನಸ, ವೆಂಕಟೇಶ್ ಪ್ರಸಾದ್ ನಟಿಸಿದ್ದಾರೆ. ಈ ಚಿತ್ರದ ಸ್ಪೆಷಲ್ ಸಾಂಗ್ ಶೂಟಿಂಗ್ ಬೆಂಗಳೂರಿನ ಕ್ಲಬ್ ಒಂದರಲ್ಲಿ ನಡೆದಿದೆ. ಸ್ಪೆಷಲ್ ಹಾಡಿನಲ್ಲಿ ನಟಿ ಸಿಂಧು ಲೋಕನಾಥ್ ಸೊಂಟ ಬಳಕಿಸಿದ್ದಾರೆ. ಚಿತ್ರತಂಡ ಈ ಬಗ್ಗೆ ಮಾಧ್ಯಮದವರ ಮುಂದೆ ಹಾಜರಾಗಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ರಾಜಕೀಯಕ್ಕೆ ಬರ್ತಾರಂತೆ ರಾಕಿ ಭಾಯ್: ಯಶ್ ಬಗ್ಗೆ ಸ್ಫೋಟಕ ಭವಿಷ್ಯ!

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಾಯಕ ನಟ ಅನೀಶ್ ತೇಜೇಶ್ವರ್ (Anish Tejeshwar) ನಟಿಸ್ತಿರುವ ಬೆಂಕಿ (Benki) ಸಿನಿಮಾದ ಹಾಡು ಬಿಡುಗಡೆ ಆಗಿದೆ. ಮೋಹಕತಾರೆ ರಮ್ಯಾ ಸಿನಿಮಾದ ಹಾಡನ್ನ ಬಿಡುಗಡೆ ಮಾಡಿ ಚಿತ್ರ ತಂಡಕ್ಕೆ ಶುಭ ಕೋರಿದ್ದಾರೆ. ಈ ಹಾಡಿಗೆ ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದಿದ್ದು, ಆನಂದ್ ರಾಜವಿಕ್ರಮ್ ಸಂಗೀತ‌ ನೀಡಿದ್ದು, ಐಶ್ವರ್ಯ ರಂಗರಾಜನ್ ಹಾಗೂ ಪಂಚಮ್ ಜೀವ ಧ್ವನಿಯಾಗಿದ್ದಾರೆ. ಕಲರ್ ಫುಲ್ ಆಗಿ ಮೂಡಿ‌ ಬಂದಿರುವ ಹಾಡಿನಲ್ಲಿ ಅನೀಶ್ ಹಾಗೂ‌ ಸಂಪದ ಜಬರ್ದಸ್ತ್ ಸ್ಟೆಪ್ಸ್ ಹಾಕಿದ್ದಾರೆ. ಪಕ್ಕ ಮಾಸ್‌ ಹಾಗೂ ಕಮರ್ಷಿಯಲ್‌ ಬೆಂಕಿ ಸಿನಿಮಾವನ್ನ ವಿಂಕ್‌ವಿಷಲ್‌ ಪ್ರೊಡಕ್ಷನ್‌ ಬ್ಯಾನರ್‌ ನಡಿ ಅನೀಶ್ ತೇಜೇಶ್ವರ್ ನಿರ್ಮಾಣ ಮಾಡ್ತಿದ್ದು, ಶಾನ್‌ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ.. 
 

Video Top Stories