100 Movie Review: ಸೈಬರ್ ಕ್ರೈಂ ಥ್ರಿಲ್ಲರ್ ಕಥೆ ಹೇಳಿದ ರಮೇಶ ಅರವಿಂದ್

ರಮೇಶ್‌ ಅರವಿಂದ್‌ ನಟಿಸಿ, ನಿರ್ದೇಶನ ಮಾಡಿರುವ 100 ಚಿತ್ರ ಬಿಡುಗಡೆಯಾಗಿದ್ದು, ಸಿನಿಪ್ರೇಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ಸ್‌ಪೆಕ್ಟರ್ ವಿಷ್ಣು ಪಾತ್ರದಲ್ಲಿ ರಮೇಶ್ ಕಾಣಿಸಿಕೊಂಡಿದ್ದು, ಚಿತ್ರವು ಸೈಬರ್‌ ಕ್ರೈಮ್‌ ಆಧಾರಿತ ಕಥಾಹಂದರವನ್ನೊಳಗೊಂಡಿದೆ. 

First Published Nov 20, 2021, 11:51 AM IST | Last Updated Nov 20, 2021, 4:24 PM IST

ರಮೇಶ್‌ ಅರವಿಂದ್‌ (Ramesh Aravind) ನಟಿಸಿ, ನಿರ್ದೇಶನ ಮಾಡಿರುವ '100' ಚಿತ್ರ ಬಿಡುಗಡೆಯಾಗಿದ್ದು, ಸಿನಿಪ್ರೇಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ಸ್‌ಪೆಕ್ಟರ್ ವಿಷ್ಣು ಪಾತ್ರದಲ್ಲಿ ರಮೇಶ್ ಕಾಣಿಸಿಕೊಂಡಿದ್ದು, ಚಿತ್ರವು ಸೈಬರ್‌ ಕ್ರೈಮ್‌ ಆಧಾರಿತ ಕಥಾಹಂದರವನ್ನೊಳಗೊಂಡಿದೆ. ಒಂದು ಕಂಪ್ಯೂಟರ್ ಇಟ್ಟುಕೊಂಡು ತಂತ್ರಜ್ಙಾನದ ಮೂಲಕ ಏನೇನೆಲ್ಲಾ ಮಾಡಬಹುದು ಅನ್ನುವುದನ್ನು ನೋಡಿದರೆ ಗಾಬರಿಯಾಗುತ್ತದೆ. ಆ ಗಾಬರಿಯನ್ನು ಆತಂಕವನ್ನು ಚಿತ್ರದಲ್ಲಿ ತೋರಿಸಲಾಗಿದ್ದು, ಒಂದು ಕುಟುಂಬದಲ್ಲಿ ಎದ್ದ ಸಣ್ಣದೊಂದು ಬಿರುಗಾಳಿ ತಣ್ಣಾಗಾದಾಗ ಆಗುವ ನಿರಾಳತೆಯನ್ನು ಈ ಸಿನಿಮಾದಲ್ಲಿ ಕಾಣಬಹುದಾಗಿದೆ.

'100' ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಸುರ ಪ್ರೊಡಕ್ಷನ್ ಬ್ಯಾನರ್‌ನಲ್ಲಿ '100' ಚಿತ್ರ ತಯಾರಾಗಿದ್ದು, ರಮೇಶ್ ಅರವಿಂದ್ ತಂಗಿ ಪಾತ್ರದಲ್ಲಿ ರಚಿತಾ ರಾಮ್ ನಟಿಸಿದ್ದಾರೆ. ಶ್ರೀಮತಿ ಉಮಾ, ಶ್ರೀ ಎಂ. ರಮೇಶ್ ರೆಡ್ಡಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಸತ್ಯ ಹೆಗಡೆ ಕ್ಯಾಮರಾ ಕೈಚಳಕ, ಶ್ರೀನಿವಾಸ್ ಕಲಾಲ್ ಸಂಕಲನ, ಗುರು ಕಶ್ಯಪ್ ಸಂಭಾಷಣೆ,  ಧನ೦ಜಯ ನೃತ್ಯ ಸಂಯೋಜನೆ, ಜಾಲಿ ಬಾಸ್ಟಿನ್, ಡಾ.ರವಿವರ್ಮ ಸಾಹಸ ಈ ಚಿತ್ರಕ್ಕಿದೆ. ಜೊತೆಗೆ ಪೂರ್ಣಾ, ಪ್ರಕಾಶ್ ಬೆಳವಾಡಿ, ಶೋಭರಾಜ್, ರಾಜು ತಾಳಿಕೋಟೆ,  ಮಾಲತಿ ಸುಧೀರ್, ಬೇಬಿ ಸ್ಮಯ ಸೇರಿದಂತೆ ಮುಂತಾದವರು ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment