Asianet Suvarna News Asianet Suvarna News

Avatar Purusha: ತೆರೆ ಮೇಲೆ ನಾನಾ ಅವತಾರಗಳಲ್ಲಿ ಅಧ್ಯಕ್ಷ ಶರಣ್

ಕಾಮಿಡಿ ಕಿಂಗ್ ಅಧ್ಯಕ್ಷ ಶರಣ್ ಅಭಿನಯದ ಅವತಾರ ಪುರುಷ ಚಿತ್ರ ಡಿಸೆಂಬರ್‌ 10ರಂದು ತೆರೆಗೆ ಬರುತ್ತಿದೆ. ನನ್ನ ಉಳಿದ ಸಿನಿಮಾಗಳಲ್ಲಾದರೆ ನನಗೆ ಒಂದೇ ಪಾತ್ರ. ಆದರೆ, ಇದರಲ್ಲಿ ಹಾಗಿಲ್ಲ. ನಾನು ನಾನಾ ಅವತಾರ ತಾಳಿದ್ದೇನೆ. ಈ ನನ್ನ ಎಲ್ಲ ಅವತಾರಗಳು ಪ್ರೇಕ್ಷಕರಿಗೆ ಇಷ್ಟವಾಗುತ್ತದೆ ಎಂದು ಶರಣ್ ತಿಳಿಸಿದ್ದಾರೆ.

ಸಿಂಪಲ್ ಸುನಿ (Simple Suni) ನಿರ್ದೇಶನದ ಕಾಮಿಡಿ ಕಿಂಗ್ ಅಧ್ಯಕ್ಷ ಶರಣ್ (Sharan) ಅಭಿನಯದ 'ಅವತಾರ ಪುರುಷ' (Avatar Purusha) ಚಿತ್ರ ಡಿಸೆಂಬರ್‌ 10ರಂದು ತೆರೆಗೆ ಬರುತ್ತಿದ್ದು, ಸಿನಿಮಾ ಬಗ್ಗೆ ಮಾಹಿತಿ ನೀಡುವುದಕ್ಕೆ ಇಡೀ ಚಿತ್ರತಂಡ ಸೇರಿತ್ತು. ನನ್ನ ಉಳಿದ ಸಿನಿಮಾಗಳಲ್ಲಾದರೆ ನನಗೆ ಒಂದೇ ಪಾತ್ರ. ಆದರೆ, ಇದರಲ್ಲಿ ಹಾಗಿಲ್ಲ. ನಾನು ನಾನಾ ಅವತಾರ ತಾಳಿದ್ದೇನೆ. ಈ ನನ್ನ ಎಲ್ಲ ಅವತಾರಗಳು ಪ್ರೇಕ್ಷಕರಿಗೆ ಇಷ್ಟವಾಗುತ್ತದೆ ಎಂಬ ಭರವಸೆಯನ್ನು ಶರಣ್ ಈ ಸಂದರ್ಭದಲ್ಲಿ ತಿಳಿಸಿದರು. ಪುಷ್ಕರ್​ ಮಲ್ಲಿಕಾರ್ಜುನಯ್ಯ (Pushkar Mallikarjunaiah) ಸಿನಿಮಾ ನಿರ್ಮಾಣ ಮಾಡಿದ್ದಾರೆ.

Avatar Purusha: ಶರಣ್ ಜೊತೆಗಿನ ಚಿತ್ರದ ಬಗ್ಗೆ ಆಶಿಕಾ ರಂಗನಾಥ್ ಮಾತು

ಚಿತ್ರದ ಟೀಸರ್‌ ಹಾಗೂ ಟ್ರೇಲರ್‌ನಿಂದ ಈಗಾಗಲೇ ಸಾಕಷ್ಟು ಗಮನ ಸೆಳೆದಿದೆ. ಸಸ್ಪೆನ್ಸ್ ಥ್ರಿಲ್ಲಿಂಗ್ ಇರುವ ಚಿತ್ರದಲ್ಲಿ ಶರಣ್ ಅವರನ್ನು ಹಿಂದೆಂದೂ ಕಾಣದ ರೀತಿಯಲ್ಲಿ ಮತ್ತು ಹೊಸ ಅವತಾರದಲ್ಲಿ ಕಾಣಬಹುದಾಗಿದ್ದು, ಅವರ ವೃತ್ತಿ ಜೀವನದಲ್ಲೇ ಬಿಗ್ ಬಜೆಟ್ ಚಿತ್ರವಾಗಿದೆ. ಮುಖ್ಯವಾಗಿ ಸಿಕ್ಕಾಪಟ್ಟೆ ಶಾಕ್‌ನೊಂದಿಗೆ ಭಯಮೂಡಿಸುವಂತಹ ಬ್ಲ್ಯಾಕ್ ಮ್ಯಾಜಿಕ್ (Black Maagic) ಚಿತ್ರಕಥೆ ಈ ಚಿತ್ರದಲ್ಲಿದೆ. ಶರಣ್‌ ನಟನೆಯ 'ಅವತಾರಪುರುಷ' ಚಿತ್ರ ಎರಡು ಭಾಗಗಳಲ್ಲಿ ತೆರೆಗೆ ಬರಲಿದೆ. ಶರಣ್‌ಗೆ ಜೋಡಿಯಾಗಿ ಆಶಿಕಾ ರಂಗನಾಥ್ (Ashika Ranganath) ನಟಿಸಿದ್ದಾರೆ. ಅರ್ಜುನ್​ ಜನ್ಯ (Arjun Janya) ಅವರ ಸಂಗೀತ ಸಂಯೋಜನೆ ಚಿತ್ರಕ್ಕಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment