'ಗರುಡಗಮನ ವೃಷಭವಾಹನ': ವಿಶೇಷ ಸಂದರ್ಶನದಲ್ಲಿ ರಾಜ್‌ ಬಿ. ಶೆಟ್ಟಿ ಹಾಗೂ ರಿಷಬ್‌ ಶೆಟ್ಟಿ

ಮಂಗಳೂರಿನ ಭೂಗತ ಜಗತ್ತಿನ ಸುತ್ತ ಕಥಾಹಂದರವಿರುವ ಗರುಡಗಮನ ವೃಷಭವಾಹನ ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಈ ಬಗ್ಗೆ ರಾಜ್‌ ಬಿ. ಶೆಟ್ಟಿ ಹಾಗೂ ರಿಷಬ್‌ ಶೆಟ್ಟಿ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಸಂದರ್ಶನ ಕೊಟ್ಟಿದ್ದಾರೆ.

First Published Nov 19, 2021, 5:37 PM IST | Last Updated Nov 19, 2021, 5:37 PM IST

ರಿಷಬ್‌ ಶೆಟ್ಟಿ (Rishab Shetty) ಹಾಗೂ ರಾಜ್‌ ಬಿ. ಶೆಟ್ಟಿ (Raj B Shetty) ಕಾಂಬಿನೇಷನ್‌ನ 'ಗರುಡಗಮನ ವೃಷಭವಾಹನ' (Garuda Gamana Vrishabha Vahana) ಚಿತ್ರವು ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಇದೀಗ 'ಗರುಡಗಮನ ವೃಷಭವಾಹನ' ಚಿತ್ರದ ಬಗ್ಗೆ ರಾಜ್‌ ಬಿ. ಶೆಟ್ಟಿ ಹಾಗೂ ರಿಷಬ್‌ ಶೆಟ್ಟಿ ಸುವರ್ಣ ನ್ಯೂಸ್‌ಗೆ ಎಕ್ಸ್‌ಕ್ಲೂಸಿವ್ ಸಂದರ್ಶನ ಕೊಟ್ಟಿದ್ದು, ಚಿತ್ರದ ಕಥೆ, ತಮ್ಮ ಪಾತ್ರಗಳು ಸೇರಿದಂತೆ ಹಲವಾರು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಈಗಾಗಲೇ ಚಿತ್ರ ವೀಕ್ಷಿಸಿದ ಸಿನಿಮಂದಿಯ ಬಗ್ಗೆ ಕುತೂಹಲಕಾರಿ ವಿಷಯಗಳನ್ನು ಈ ಸಂದರ್ಶನಲ್ಲಿ ತಿಳಿಸಿದ್ದಾರೆ.

ಶಿವನ ಪಾತ್ರದಲ್ಲಿ ತಲ್ಲೀನನಾಗಿದ್ದಾಗ ಕಂಟ್ರೋಲು ಕಳೆದುಕೊಂಡಿದ್ದಿದೆ: Raj B Shetty

ಇನ್ನು ಚಿತ್ರಕ್ಕೆ ರಾಜ್‌ ಬಿ ಶೆಟ್ಟಿ ಅವರೇ ಆಕ್ಷನ್ ಕಟ್ ಹೇಳಿದ್ದು, ಮಂಗಳೂರಿನ ಭೂಗತ ಜಗತ್ತಿನ ಸುತ್ತ ಕಥಾಹಂದರವಿದೆ. ಇದರಲ್ಲಿ ಗರುಡಗಮನ ಅಂದರೆ ವಿಷ್ಣು. ಪ್ರಧಾನ ಪಾತ್ರಗಳಲ್ಲಿ ಒಬ್ಬನಿಗೆ ವಿಷ್ಣುವಿನ ಸಂಯಮ ಸ್ವಭಾವ, ಇನ್ನೊಬ್ಬ ವೃಷಭವಾಹನ ಅಂದರೆ ಶಿವ, ಆತನದು ನಿಯಂತ್ರಣವೇ ಇಲ್ಲದ ವಿಪರೀತ ಸ್ವಭಾವ. ಇಂಥ ಸ್ವಭಾವದ ಇಬ್ಬರು ರೌಡಿಸಂನಲ್ಲಿ ಹೇಗೆ ಸೌಂಡ್‌ ಮಾಡ್ತಾರೆ ಅನ್ನುವ ಕಥೆ. ಲೈಟರ್‌ ಬುದ್ಧ ಫಿಲಂನಡಿ ರವಿ ರೈ ಹಾಗೂ ವಚನ್‌ ಶೆಟ್ಟಿ ಚಿತ್ರ ನಿರ್ಮಿಸಿದ್ದಾರೆ. ಪರಂವಃ ಸ್ಟುಡಿಯೋ ಮೂಲಕ ಚಿತ್ರವನ್ನು ರಕ್ಷಿತ್‌ ಶೆಟ್ಟಿ ಬಿಡುಗಡೆ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment