Kerebete Movie: 'ಕೆರೆಬೇಟೆ' ಚಿತ್ರದ 3ನೇ ಹಾಡು ರಿಲೀಸ್ ಮಾಡಿದ ಅಶ್ವಿನಿ ಪುನೀತ್‌ ರಾಜ್ ‌ಕುಮಾರ್ ..!

ಸ್ಯಾಂಡಲ್ ವುಡ್‌ನಲ್ಲಿ ಸದ್ಯ ಸಿಕ್ಕಾಪಟ್ಟೆ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ ಕೆರೆಬೇಟೆ. ಗೌರಿಶಂಕರ್ ನಟನೆಯ ರಾಜ್ ಗುರು ನಿರ್ದೇಶನದ ಕೆರೆಬೇಟೆ ಚಿತ್ರಕ್ಕೆ ಈಗ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಥ್ ನೀಡಿದ್ದಾರೆ.

Share this Video
  • FB
  • Linkdin
  • Whatsapp

ಕೆರೆಬೇಟೆ ಸಿನಿಮಾದ(Kerebete movie) ಮೂರನೇ ಹಾಡನ್ನು ಅಶ್ವಿನಿ ಪುನೀತ್ ರಾಜ್‌ ಕುಮಾರ್ (Ashwini Puneeth Rajkumar)ರಿಲೀಸ್ ಮಾಡುವ ಮೂಲಕ ಸಿನಿಮಾ ತಂಡಕ್ಕೆ ಶುಭ ಹಾರೈಸಿದ್ದಾರೆ. ಈಗಾಗಲೇ ಸಿನಿಮಾದಿಂದ ಟೀಸರ್, ಟ್ರೈಲರ್ ಮತ್ತು ಎರಡು ಹಾಡುಗಳು ರಿಲೀಸ್ ಆಗಿದ್ದು, ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಇದೀಗ ಸಿನಿಮಾ ತಂಡ 3ನೇ ಹಾಡನ್ನು ರಿಲೀಸ್(Song Released) ಮಾಡುವ ಮೂಲಕ ಕುತೂಹಲ ಮತ್ತಷ್ಟು ಹೆಚ್ಚಿಸಿದೆ.'ಕಣ್ಣುಗಳೆ ಕಳೆದು ಹೋದಾಗ' ಎನ್ನುವ ಸಾಲುಗಳಿಂದ ಪ್ರಾರಂಭವಾಗುವ ಈ ಹಾಡನ್ನು ಪ್ರಮೋದ್ ಮರವಂತೆ ಬರೆದಿದ್ದಾರೆ. ಈ ಸುಂದರ ಹಾಡಿಗೆ ಸಿದ್ಧಾರ್ಥ ಬೆಳ್ಮಣ್ಣು ಧ್ವನಿ ನೀಡಿದ್ದು ಗಗನ್ ಬಡೇರಿಯಾ ಸಂಗೀತ ಸಂಯೋಜನೆ ಮಾಡಿದ್ದಾರೆ. ಇತ್ತೀಚಿಗಷ್ಟೇ ಸಿನಿಮಾತಂಡ 2ನೇ ಹಾಡನ್ನು ಶಿವಮೊಗ್ಗದಲ್ಲಿ ಅದ್ದೂರಿಯಾಗಿ ರಿಲೀಸ್ ಮಾಡಿ ಅಭಿಮಾನಿಗಳ ಗಮನ ಸೆಳೆದಿತ್ತು. ಇದೀಗ ಸಿನಿಮಾ ತಂಡ ಚಿತ್ರದ ಪ್ಯಾತೋ ಸಾಂಗ್ ರಿಲೀಸ್ ಮಾಡಿದೆ. ನಿರ್ದೇಶಕ ರಾಜ್ ಗುರು ಮಾತನಾಡಿ ನಿರ್ಮಾಪಕ ಅಶ್ವಿನಿ ಪುನೀತ್ ರಾಜಕುಮಾರ್ ಹಾಡನ್ನು ರಿಲೀಸ್(Release) ಮಾಡಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು.'ದೊಡ್ಮನೆಗೂ ನನಗೂ ಒಂದು ಸಂಬಂಧವಿದೆ‌. ಅಪ್ಪು ಸರ್ ಜೊತೆ ಸಿನಿಮಾದಲ್ಲಿ ಕೆಲಸ ಮಾಡಿದ್ದೇನೆ. ನಮ್ಮ ಮಣ್ಣಿನ ಕಥೆಗಳ ಬಗ್ಗೆ ತುಂಬಾ ಮಾತನಾಡುತ್ತಿದ್ವಿ. ಈ ರೀತಿಯ ಸಿನಿಮಾ ಅವರಿಗೆ ತುಂಬಾ ಇಷ್ಟ' ಅಂದ್ರು.

ಇದನ್ನೂ ವೀಕ್ಷಿಸಿ: Prabhas: ಉಪ್ಪಿ ಸ್ಟೈಲ್‌ನಲ್ಲಿ ಜುಟ್ಟು ಕಟ್ಕೊಂಡು ಬಂದ ಪ್ರಭಾಸ್..! ಇದು ನಟನ ಶಿವರಾತ್ರಿ ಕಲ್ಕಿ ಹೊಸ ಅವತಾರ..!

Related Video