ಮಲೆನಾಡ ಕಥೆ 'ಕೆರೆಬೇಟೆ'ಟೈಟಲ್ ಟ್ರ್ಯಾಕ್ ರಿಲೀಸ್..! ಚಿತ್ರತಂಡಕ್ಕೆ ಸಾಥ್ ಕೊಟ್ಟ ಆರಗ ಜ್ಞಾನೇಂದ್ರ, ಬಿ.ವೈ. ರಾಘವೇಂದ್ರ..!

‘ಕೆರೆಬೇಟೆ' ಸ್ಯಾಂಡಲ್‌ವುಡ್‌ನಲ್ಲಿ ಸಿಕ್ಕಾಪಟ್ಟೆ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ. ಗೌರಿಶಂಕರ್ ನಟನೆಯ ರಾಜ್ ಗುರು ನಿರ್ದೇಶನದ ಕೆರೆಬೇಟೆ ಚಿತ್ರದ ಟ್ರೈಲರ್, ಟೀಸರ್ ಮತ್ತು ರೋಮ್ಯಾಂಟಿಕ್ ಹಾಡು ಈಗಾಗಲೇ ರಿಲೀಸ್ ಆಗಿದ್ದು ಕುತೂಹಲ ದುಪ್ಪಟ್ಟು ಮಾಡಿದೆ.
 

First Published Mar 4, 2024, 11:28 AM IST | Last Updated Mar 4, 2024, 11:29 AM IST

ಇದೀಗ ಸಿನಿಮಾ ತಂಡ ಟೈಟಲ್ ಟ್ರ್ಯಾಕ್ ರಿಲೀಸ್ ಮಾಡುವ ಮೂಲಕ ಮತ್ತಷ್ಟು ನಿರೀಕ್ಷೆ ಹೆಚ್ಚಿಸಿದೆ. ಇತ್ತೀಚಿಗಷ್ಟೇ ಮೊದಲ ಹಾಡನ್ನು ರಿಲೀಸ್ ಮಾಡಿದ್ದ ಚಿತ್ರತಂಡ ಇದೀಗ ಸಿನಿಮಾದ ಬಹುನಿರೀಕ್ಷಿಯ ಟೈಟಲ್ ಟ್ರ್ಯಾಕ್ ಅನ್ನು ಅದ್ದೂರಿಯಾಗಿ ಬಿಡುಗಡೆ ಮಾಡಿದೆ. ಮಲೆನಾಡ ಅಪ್ಪಟ ಹಳ್ಳಿ ಕಥೆ ಕೆರೆಬೇಟೆ(Kerebete ). ಇಡಿ ಊರ ಮಂದಿ ಎಲ್ಲಾ ಸೇರಿ ಒಂದು ದಿನ ಫಿಕ್ಸ್ ಮಾಡಿಕೊಂಡು ಕೆರೆಬೇಟೆಗೆ ಮೀನು ಹಿಡಿತಾರೆ.ಇಂತಹ 
ವಿಶೇಷ ಕಥೆಯ ಸಿನಿಮಾ ಹಾಡನ್ನ ಎಂದರೆ ಈ ಮಲೆನಾಡಿನವರೇ ಆದ ಶಾಸಕ ಹಾಗೂ ಮಾಜಿ ಹೋಂ ಮಿನಿಸ್ಟರ್ ಆರಗ ಜ್ಞಾನೇಂದ್ರ ಹಾಗೂ ಸಂಸದರಾದ ಬಿ.ವೈ. ರಾಘವೇಂದ್ರ ರಿಲೀಸ್ ಮಾಡಿ ಸಿನಿಮಾ ತಂಡಕ್ಕೆ ಶುಭ ಹಾರೈಸಿದರು. ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಡೆದ ಟೈಟಲ್ ಟ್ರ್ಯಾಕ್ ರಿಲೀಸ್ ಕಾರ್ಯಕ್ರಮದಲ್ಲಿ ಕೆರೆಬೇಟೆ ಚಿತ್ರದ ಹಾಡು ಅದ್ದೂರಿಯಾಗಿ ಬಿಡುಗಡೆಯಾಗಿದೆ. ‘ಕೆರಿಬ್ಯಾಟಿ ಶುರುವಾತು' ಎನ್ನುವ ಈ ಟೈಟಲ್ ಟ್ರ್ಯಾಕ್(Title traack) ಅನ್ನು ಪ್ರಮೋದ್ ಮರವಂತೆ ಬರೆದಿದ್ದಾರೆ, ಗಗನ್ ಬಡೇರಿಯಾ ಸಂಗೀತ ಸಂಯೋಜನೆ ಮಾಡಿದ್ದು ಕರಿಬಸವ ತಡಕಲ್ ಈ ಹಾಡಿಗೆ ಧ್ವನಿ ನೀಡಿದ್ದಾರೆ. ಈ ಸಿನಿಮಾ ಸಂಪೂರ್ಣವಾಗಿ ಮಲೆನಾಡಿನ ಸುತ್ತಮುತ್ತವೇ ಚಿತ್ರೀಕರಣಗೊಂಡಿದೆ. ಜೊತೆಗೆ ಮಲೆನಾಡಿನವರೇ ಸೇರಿ ಈ ಸಿನಿಮಾ ಮಾಡಿದ್ದಾರೆ. ಮಲೆನಾಡಿನ ಸೌಂದರ್ಯವನ್ನು ತುಂಬಾ ಸುಂದರವಾಗಿ ತೋರಿಸಲಾಗಿದೆ. ಸದ್ಯ ರಿಲೀಸ್ ಗೆ ಸಿದ್ಧವಾಗಿರುವ 'ಕೆರೆಬೇಟೆ' ಸಿನಿಮಾ ಟೈಟಲ್ ಟ್ರ್ಯಾಕ್ ಮೂಲ ಮತ್ತಷ್ಟು ಕುತೂಹಲ ಹೆಚ್ಚಿಸಿದೆ.

ಇದನ್ನೂ ವೀಕ್ಷಿಸಿ:  ರೈತ ರತ್ನ ಪ್ರಶಸ್ತಿ 2024: 13 ಸಾಧಕ ರೈತರಿಗೆ ಪ್ರಶಸ್ತಿ ಪ್ರಧಾನ