KGF 2: ಯಶ್ ಜೊತೆ ಸೊಂಟ ಬಳುಕಿಸಿದ್ದಾರಂತೆ ಬಾಲಿವುಡ್‌ ನಟಿ ನೋರಾ ಫತೇಹಿ

ಈ ವರ್ಷ 'ಕೆಜಿಎಫ್ 2' ಸಿನಿಮಾ ಬಿಡುಗಡೆ ನಿರೀಕ್ಷೆಯಲ್ಲಿರುವ ಅಭಿಮಾನಿಗಳಿಗೆ 'ಕೆಜಿಎಫ್‌ 2' ಚಿತ್ರದ ಹಾಡುಗಳ ಬಗ್ಗೆ ಹೊಸ ಸುದ್ದಿ ಹರಿದಾಡುತ್ತಿದೆ. ಭಾಗ ಎರಡರಲ್ಲೂ ಸೆನ್ಸೇಷನ್ ಕ್ರಿಯೇಟ್ ಮಾಡುವ ಹಾಡುಗಳಿವೆ ಎನ್ನಲಾಗಿದೆ. 

Share this Video
  • FB
  • Linkdin
  • Whatsapp

ಈ ವರ್ಷ 'ಕೆಜಿಎಫ್ 2' (KGF 2) ಸಿನಿಮಾ ಬಿಡುಗಡೆ ನಿರೀಕ್ಷೆಯಲ್ಲಿರುವ ಅಭಿಮಾನಿಗಳಿಗೆ 'ಕೆಜಿಎಫ್‌ 2' ಚಿತ್ರದ ಹಾಡುಗಳ ಬಗ್ಗೆ ಹೊಸ ಸುದ್ದಿ ಹರಿದಾಡುತ್ತಿದೆ. ಭಾಗ ಎರಡರಲ್ಲೂ ಸೆನ್ಸೇಷನ್ ಕ್ರಿಯೇಟ್ ಮಾಡುವ ಹಾಡುಗಳಿವೆ ಎನ್ನಲಾಗಿದೆ. ಈಗಾಗಲೇ ಮೌನಿ ರಾಯ್‌ ಜೊತೆ ಮತ್ತು ತಮನ್ನಾ ಭಾಟಿಯಾ ಜೊತೆ ಯಶ್ (Yash) ಮೊದಲ ಭಾಗದಲ್ಲಿ ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಇದೀಗ 'ಕೆಜಿಎಫ್ 2'ನಲ್ಲಿ ಯಶ್ ಜೊತೆ ನಟಿ ನೋರಾ ಫತೇಹಿ (Nora Fatehi) ಸೊಂಟ ಬಳುಕಿಸಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದ್ದು, ಚಿತ್ರತಂಡ ಈ ಬಗ್ಗೆ ಅಧಿಕೃತವಾಗಿ ತಿಳಿಸಬೇಕು.

KGF 2 Yash Remuneration: ಕೆಜಿಎಫ್ 2 ಚಿತ್ರಕ್ಕಾಗಿ ಯಶ್ ಪಡೆದ ಸಂಭಾವನೆ ಇದು..!

ಇನ್ನು ಬಾಲಿವುಡ್‌ನಲ್ಲಿ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದಾರೆ ನಟಿ ನೋರಾ ಫತೇಹಿ. ಹಾಗಂತ ಅವರು ಭಾರತದವರಲ್ಲ. ಮೂಲತಃ ಕೆನಡಾದವರಾದ ನೋರಾ ಪ್ರಸ್ತುತ ಹಿಂದಿ ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಅವರು ನರ್ತಿಸಿದ ಹಾಡುಗಳು ಯೂಟ್ಯೂಬ್‌ನಲ್ಲಿ ಕೋಟ್ಯಂತರ ಬಾರಿ ವೀಕ್ಷಣೆ ಕಾಣುತ್ತವೆ. ಹಿಂದಿ ಮಾತ್ರವಲ್ಲದೆ ದಕ್ಷಿಣ ಭಾರತದ ಚಿತ್ರರಂಗದಲ್ಲೂ ನೋರಾ ನಟಿಸಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video