ವಾಲ್ಮೀಕಿ ಜಾತ್ರೆಗೆ ನಟ ಕಿಚ್ಚ ಸುದೀಪ್‌ ಗೈರು: ಕುರ್ಚಿ ತೂರಾಟ ನಡೆಸಿ ಅಭಿಮಾನಿಗಳ ಗಲಾಟೆ

ವಾಲ್ಮೀಕಿ ಜಾತ್ರೆಗೆ ನಟ ಕಿಚ್ಚ ಸುದೀಪ್‌ ಬಾರದಿದ್ದಕ್ಕೆ ಅಭಿಮಾನಿಗಳ ಆಕ್ರೋಶಗೊಂಡು, ಕುರ್ಚಿ ತೂರಾಟ ನಡೆಸಿ ಗಲಾಟೆ ಮಾಡಿರುವ ಘಟನೆ ನಡೆದಿದೆ.

Share this Video
  • FB
  • Linkdin
  • Whatsapp

ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಲ್ಲಿ ನಡೆಯುತ್ತಿದ್ದ ವಾಲ್ಮೀಕಿ ಜಾತ್ರೆಗೆ ಕಿಚ್ಚ ಸುದೀಪ್ ಬರುತ್ತಾರೆ ಎಂದು ರಾಜ್ಯದ ಮೂಲೆಮೂಲೆಗಳಿಂದ ಸಾವಿರಾರು ಅಭಿಮಾನಿಗಳು ಆಗಮಿಸಿದ್ದರು. ಆದರೆ ಕಾರ್ಯಕ್ರಮಕ್ಕೆ ನಟ ಕಿಚ್ಚ ಸುದೀಪ್ ಗೈರಾಗಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ತಮ್ಮ ನೆಚ್ಚಿನ ನಟ ಸುದೀಪ್ ಅವರು, ವಾಲ್ಮೀಕಿ ಜಾತ್ರೆಗೆ ಆಗಮಿಸಲಿಲ್ಲ ಎಂದು ರೊಚ್ಚಿಗೆದ್ದ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಹಾಕಿದ್ದ ಕುರ್ಚಿಗಳನ್ನು ಹೊಡೆದು ಹಾಕಿದ್ದಾರೆ. ವಾಲ್ಮೀಕಿ ಶ್ರೀಗಳು ಅಭಿಮಾನಿಗಳನ್ನು ಎಷ್ಟೇ ಸಮಾಧಾನಿಸಿದರೂ, ಯಾವುದೇ ಪ್ರಯೋಜನ ಆಗಲಿಲ್ಲ.

ಶಿವಣ್ಣನ ಹಾಡಿಗೆ ಶಾರುಖ್ ಸ್ಟೆಪ್: ದಿಗ್ಗಜರ ಜೋಶ್ ನೋಡಿ ಫ್ಯಾನ್ಸ್ ಖುಷ ...

Related Video