ಅಳಿಯನಿಗಾಗಿ ಚಿತ್ರ ನಿರ್ಮಾಣಕ್ಕಿಳಿದ ಕಿಚ್ಚ ಸುದೀಪ್: ಸದ್ಯದಲ್ಲೇ ಬಿಗ್ ಸ್ಕ್ರೀನ್‌ನಲ್ಲಿ ಸಂಚಿತ್ ಸಂಜೀವ್
ರಾಕಿಂಗ್ ಸ್ಟಾರ್ ಯಶ್ ತಮ್ಮ ಕುಟುಂಬದೊಂದಿಗೆ ಹೊಸ ವರ್ಷವನ್ನು ಆಚರಿಸಿದ್ದಾರೆ. ಕಿಚ್ಚ ಸುದೀಪ್ ತಮ್ಮ ಅಕ್ಕನ ಮಗ ಸಂಚಿತ್ ಸಂಜೀವ್ ಅವರ ಚೊಚ್ಚಲ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಮ್ಯಾಕ್ಸ್ ಸಿನಿಮಾದ ಸಕ್ಸಸ್ ಖುಷಿಯಲ್ಲಿರುವ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಸುದ್ದಿ ಕೊಟ್ಟಿದ್ದಾರೆ. ಹೊಸ ವರ್ಷಕ್ಕೆ ಅಭಿನಯ ಚಕ್ರವರ್ತಿ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಆದ್ರೆ ಇದು ಕಿಚ್ಚ ನಾಯಕನಾಗಿ ನಟಿಸುತ್ತಿರೋ ಸಿನಿಮಾ ಅಲ್ಲ. ಬದಲಾಗಿ ಸುದೀಪ್ ನಿರ್ಮಾಣ ಮಾಡ್ತಾ ಇರೋ ಚಿತ್ರ ಇದಾಗಿದೆ. ಕಿಚ್ಚನ ಸುಪ್ರಿಯಾನ್ವಿ ಪ್ರೊಡಕ್ಷನ್ ಮತ್ತು ಕೆ ಆರ್ ಜಿ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವ ಸಿನಿಮಾ ಇದಾಗಿದ್ದು, ಈ ಸಿನಿಮಾದಲ್ಲಿ ನಾಯಕನಾಗಿ ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್ ನಟಿಸಲಿದ್ದಾರೆ. ಇದು ಸಂಚಿತ್ ಚೊಚ್ಚಲ ಸಿನಿಮಾವಾಗಿದ್ದು, ಕಿಚ್ಚ ಬಂಡವಾಳ ಹೂಡ್ತಿರೋದು ಸಿನಿಮಾ ಮೇಲಿನ ನಿರೀಕ್ಷೆಯನ್ನ ದುಪ್ಪಟ್ಟು ಮಾಡಿದೆ.
ಮತ್ತೊಂದೆಡೆ ಟಾಕ್ಸಿಕ್ ಸೆಕೆಂಡ್ ಶೆಡ್ಯೂಲ್ ಮುಗಿಸಿ ಬೆಂಗಳೂರಿಗೆ ಮರಳಿರೋ ರಾಕಿಂಗ್ ಸ್ಟಾರ್ ಯಶ್ ಫ್ಯಾಮಿಲಿ ಜೊತೆಗೆ ನ್ಯೂ ಇಯರ್ ಸೆಲೆಬ್ರೇಟ್ ಮಾಡಿದ್ದಾರೆ. ಪತ್ನಿ ರಾಧಿಕಾ ಪಂಡಿತ್ ಮಕ್ಕಳಾದ ಯಥರ್ವ ಮತ್ತು ಆಯ್ರಾ ಜೊತೆ ತಮ್ಮ ಅಪಾರ್ಟ್ಮೆಂಟ್ ನಲ್ಲಿ ಸಂಭ್ರಮದಿಂದ ಹೊಸ ವರ್ಷವನ್ನ ಸ್ವಾಗತಿಸಿದ್ದಾರೆ ಯಶ್. ಸದ್ಯ ಯಶ್ ಸೋಷಿಯಲ್ ಮಿಡಿಯಾದಲ್ಲಿ ಈ ಫೋಟೋಗಳನ್ನ ಹಂಚಿಕೊಂಡು ಅಭಿಮಾನಿಗಳಿಗೂ ನ್ಯೂ ಇಯರ್ ವಿಶ್ ಮಾಡಿದ್ದಾರೆ. ಮತ್ತೊಂದೆಡೆ