ಕಿಚ್ಚನ ಮುಂದಿನ ಸಿನಿಮಾ ಬಿಲ್ಲರಂಗ ಭಾಷಾ: ಸ್ಪಷ್ಟನೆ ನೀಡಿದ ಸುದೀಪ್..!

ವಿಕ್ರಾಂತ್ ರೋಣ ಸಿನಿಮಾ ಬಳಿಕ ಕಿಚ್ಚ ಸುದೀಪ್ ಮುಂದಿನ ಸಿನಿಮಾ ಯಾವುದು ಎಂದು ಅಭಿಮಾನಿಗಳಲ್ಲಿ ಕುತೂಹಲ ಮೂಡಿತ್ತು. ಆದರೆ ಇದೀಗ ಸುದೀಪ್ ಮಾತಾಡಿರುವ ವಿಡಿಯೋ ವೈರಲ್ ಆಗುತ್ತಿದ್ದು, ಮುಂದಿನ ಸಿನಿಮಾದ ಹಿಂಟ್ ಕೊಟ್ಟಿದ್ದಾರೆ.

Share this Video
  • FB
  • Linkdin
  • Whatsapp

ನಟ ಕಿಚ್ಚ ಸುದೀಪ್ ವಿಕ್ರಾಂತ್ ರೋಣ ಯಶಸ್ಸಿನ ಬಳಿಕ ತಮ್ಮ ಮುಂದಿನ ಸಿನಿಮಾದ ಬಗ್ಗೆ ಎಲ್ಲಿಯೂ ಹೇಳಿರಲಿಲ್ಲ. ಹೀಗಾಗಿ ಕಿಚ್ಚನ ಮುಂದಿನ ಸಿನಿಮಾ ಯಾವುದು ಎಂದು ಗಾಂಧಿನಗರ ಅಷ್ಟೇ ಅಲ್ಲದೇ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಮಾತುಕತೆ ಶುರುವಾಗಿತ್ತು. ಈ ನಡುವೆ ಹೊಂಬಾಳೆ ಫಿಲ್ಮ್ಸ್‌ನ ಕಾರ್ಯಕಾರಿ ನಿರ್ಮಾಪಕರ ಜೊತೆಗಿನ ಫೋಟೋ ಕೂಡ ಅಚ್ಚರಿ ಮೂಡಿಸಿತ್ತು. ಆದರೆ ಇದಲ್ಲಕ್ಕೆ ಇದೀಗ ತೆರೆ ಬಿದ್ದಿದ್ದು, ಸುದೀಪ್ ನೆಕ್ಸ್ಟ್ ಸಿನಿಮಾ ಬಗ್ಗೆ ಅಪ್‌ಡೇಟ್ ಸಿಕ್ಕಿದೆ. ಸುದೀಪ್ ಮಾತನಾಡಿದ ವಿಡಿಯೋ ವೈರಲ್ ಆಗಿದ್ದು, ಬಿಲ್ಲರಂಗ ಭಾಷಾ ಸಿನಿಮಾದ ಸ್ಕ್ರಿಪ್ಟ್ ಬಹುತೇಕ ಫೈನಲ್ ಆಗಿದೆ. ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಶೂಟಿಂಗ್ ಶುರುವಾಗಲಿದೆ ಎಂದಿದ್ದಾರೆ.

Related Video