ಕನ್ನಡ ಚಿತ್ರರಂಗದ ದಿಗ್ಗಜ ನಟಿಯ ಯುಗಾಂತ್ಯ ! ಉಸಿರು ನಿಲ್ಲಿಸಿದ ಚಿತ್ರ ರಂಗದ ಮಹಾನ್‌ ಚೇತನ !

ನಟಿ ಲೀಲಾವತಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಶುಕ್ರವಾರ ನಿಧನರಾಗಿದ್ದಾರೆ.
 

Share this Video
  • FB
  • Linkdin
  • Whatsapp

ನ್ನಡ ಚಿತ್ರರಂಗದ ದಿಗ್ಗಜ ನಟಿ ಲೀಲಾವತಿ(Leelavathi) ವಿಧಿವಶರಾಗಿದ್ದಾರೆ. ನಟಿ ಲೀಲಾವತಿ ವಯೋಸಹಜ ಕಾಯಿಲೆಯಿಂದ ಶುಕ್ರವಾರ ನಿಧನರಾಗಿದ್ದಾರೆ. ಇಂದು ನೆಲಮಂಗಲದ (Nelamangala) ಸೋಲದೇವನಹಳ್ಳಿ ತೋಟದ ಮನೆಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತಾ ಕಾರ್ಯ ನಡೆಯುತ್ತಿದೆ. ಅಮ್ಮನ ನಿಧನ ಸುದ್ದಿ ತಿಳಿಯುತ್ತಿದ್ದ ನಟ ವಿನೋದ್ ರಾಜ್‌(Vinod raj) ಕುಸಿದುಬಿದ್ದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ನಟಿಗೆ ಮನೆಯಲ್ಲೇ ಚಿಕಿತ್ಸೆ ಕೊಡಲಾಗುತ್ತಿತ್ತು. ಕೆಲ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಅವರ ತೋಟದ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದರು. ಜೊತೆ ಶಿವರಾಜ್‌ ಕುಮಾರ್‌ ದಂಪತಿ ಸಹ ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ್ದರು. ವಿನೋದ್ ರಾಜ್‌ ಕುಮಾರ್‌ ಅಮ್ಮನನ್ನು ಉಳಿಸಿಕೊಳ್ಳಲು ಹಲವಾರು ಪ್ರಯತ್ನಗಳನ್ನು ಮಾಡಿದ್ದರು. 

ಇದನ್ನೂ ವೀಕ್ಷಿಸಿ: ಲೀಲಾವತಿಯವರ ಅಗಲಿಕೆಯಿಂದ ಕನ್ನಡ ಚಿತ್ರರಂಗ ಬಡವಾಗಿದೆ: ಯಡಿಯೂರಪ್ಪ

Related Video