Shiva Rajkumar: ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಗೆ ಹೋಗಲ್ಲ

ಮೇಕೆದಾಟು ಯೋಜನೆಗೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದೆ. ಈ ಪಾದಯಾತ್ರೆಯಲ್ಲಿ ಸ್ಯಾಂಡಲ್‌ವುಡ್‌ನ ಹ್ಯಾಟ್ರಿಕ್ ಹಿರೋ ನಟ ಶಿವರಾಜ್‌ಕುಮಾರ್ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿತ್ತು. ಆದರೆ ಇದೀಗ ಶಿವಣ್ಣ ಮೇಕೆದಾಟು ಪಾದಯಾತ್ರೆಗೆ ಹೋಗಲ್ಲ ಎಂದು ತಿಳಿದು ಬಂದಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜ.09): ಮೇಕೆದಾಟು (Mekedatu) ಯೋಜನೆಗೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ (Congress) ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದೆ. ಈ ಪಾದಯಾತ್ರೆಯಲ್ಲಿ ಸ್ಯಾಂಡಲ್‌ವುಡ್‌ನ ಹ್ಯಾಟ್ರಿಕ್ ಹಿರೋ ನಟ ಶಿವರಾಜ್‌ಕುಮಾರ್ (Shiva Rajkumar) ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿತ್ತು. ಆದರೆ ಇದೀಗ ಶಿವಣ್ಣ ಮೇಕೆದಾಟು ಪಾದಯಾತ್ರೆಗೆ ಹೋಗಲ್ಲ ಎಂದು ತಿಳಿದು ಬಂದಿದೆ. ಇದಕ್ಕೆ ಕಾರಣ ಆಪ್ತರು, ಅಭಿಮಾನಿಗಳು ನೀಡಿದ ಸಲಹೆಯ ಮೇರೆಗೆ ಶಿವಣ್ಣ ಪಾದಯಾತ್ರೆಯಲ್ಲಿ ಭಾಗಿಯಾಗಲ್ಲ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಆಪ್ತ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.

Mekedatu Yojana : ಕಾಂಗ್ರೆಸ್ ಪಾದಯಾತ್ರೆಗೆ ಪೂರ್ವಭಾವಿ ಸಭೆ

ಇತ್ತೀಚೆಗಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಕರ್ನಾಟಕ ಚಲನಚಿತ್ರ‌ ವಾಣಿಜ್ಯ ಮಂಡಳಿಗೆ (Karnataka Film Chamber Of Commerce) ಭೇಟಿ ನೀಡಿ, ಮನವಿ ಪತ್ರದ ಮುಖೇನ ಮೇಕೆದಾಟು ಪಾದಯಾತ್ರೆಗೆ ಬೆಂಬಲ ನೀಡುವಂತೆ ಕೋರಿದ್ದರು. ಇನ್ನು, ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಮೇಕೆದಾಟಿನಿಂದ ಬೆಂಗಳೂರಿಗೆ (Bengaluru) ಪಾದಯಾತ್ರೆ ಹಮ್ಮಿಕೊಂಡಿದ್ದು, ಇದೊಂದು ಪಕ್ಷಾತೀತ ಹೋರಾಟವಾಗಿದೆ. ನಾಯಕತ್ವ ಮಾತ್ರ ಕಾಂಗ್ರೆಸ್‌ನದ್ದಾಗಿರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ (KPCC President) ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video