'ಅನ್‌ಲಾಕ್' ಮಾಡಿ ಡಿಂಗ್ ಡಾಂಗ್ ಆಡೋಕೆ ಸಜ್ಜಾದ ಮಿಲಿಂದ್-ರಚೆಲ್ ಜೋಡಿ!

ಸ್ಯಾಂಡಲ್​ವುಡ್​ನಲ್ಲಿ ಟೈಟಲ್​ನಿಂದಲೇ ಸದ್ದು ಮಾಡುತ್ತಿರೋ ಸಿನಿಮಾ 'ಅನ್‌ಲಾಕ್ ರಾಘವ'.. ಈ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಫೆಬ್ರವರಿ 7, 2025 ರಂದು ಅನ್ ಲಾಕ್ ರಾಘವ ಚಿತ್ರ ತೆರೆ ಮೇಲೆ ಬರಲಿದೆ. ಅನ್ ಲಾಕ್ ರಾಘವ ಸಿನಿಮಾದಲ್ಲಿ ಮಿಲಿಂದ್ ಗೌತಮ್ ಹಾಗೂ ರಚೆಲ್ ಡೇವಿಡ್ ನಾಯಕ-ನಾಯಕಿಯಾಗಿ ನಟಿಸಿದ್ದಾರೆ. 

First Published Dec 22, 2024, 7:09 PM IST | Last Updated Dec 22, 2024, 7:09 PM IST

ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ 'ಅನ್ ಲಾಕ್ ರಾಘವ' ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. 07 ಫೆಬ್ರವರಿ 2025 ರಂದು ಈ ಚಿತ್ರ ಬಿಡುಗಡೆಯಾಗಲಿದೆ. ಯುವ ಪ್ರತಿಭೆಗಳಾದ ಮಿಲಿಂದ್ ಹಾಗೂ ರೆಚೆಲ್ ಡೇವಿಡ್(ಲವ್ ಮಾಕ್ಟೇಲ್) ನಾಯಕ-ನಾಯಕಿಯಾಗಿ ನಟಿಸಿರುವ ಈ ಚಿತ್ರವನ್ನು ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ನಿರ್ಮಿಸಿದ್ದು, ದೀಪಕ್ ಮಧುವನಹಳ್ಳಿ ನಿರ್ದೇಶಿಸಿದ್ದಾರೆ. 

ಇದೊಂದು ಪಕ್ಕಾ‌ ಮನೋರಂಜನೆಯ ರಸದೌತಣ ನೀಡುವ , ಪ್ರೇಕ್ಷಕ ಕೊಟ್ಟ ದುಡ್ಡಿಗೆ ಮೋಸ ಮಾಡದ ಸಿನಿಮಾ. 'ರಾಮ ರಾಮ ರೆ' ಖ್ಯಾತಿಯ ಸತ್ಯಪ್ರಕಾಶ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಹೆಚ್ಚಿನ ಭಾಗದ ಚಿತ್ರೀಕರಣ ಚಿತ್ರದುರ್ಗದಲ್ಲಾಗಿದೆ. ಲವಿತ್ ಅವರ ಛಾಯಾಗ್ರಹಣದಲ್ಲಿ ಚಿತ್ರದುರ್ಗದ ಸೊಬಗನ್ನು ನೋಡುವುದೇ ಚೆಂದ. ಅನೂಪ್ ಸೀಳಿನ್ ಅವರು ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಈಗಾಗಲೇ ಪ್ರೇಕ್ಷಕರ ಮನ ಗೆದ್ದಿದೆ. ಚಿತ್ರ ಕೂಡ ಎಲ್ಲರ ಮನಸ್ಸಿಗೆ ಹತ್ತಿರವಾಗಲಿದೆ ಎಂದರು ನಿರ್ದೇಶಕ ದೀಪಕ್ ಮಧುವನಹಳ್ಳಿ.

ಸತ್ಯಪ್ರಕಾಶ್ ಅವರು ಹೇಳಿದ ಕಥೆ ಬಹಳ ಇಷ್ಟವಾಯಿತು. ಹೊಸ ನಾಯಕನ ಎಂಟ್ರಿಗೆ ಬೇಕಾದ ಎಲ್ಲಾ  ಅಂಶಗಳನ್ನು ಸೇರಿಸಿ ಒಂದು ಚೆಂದವಾದ ಕಥೆಯನ್ನು ಸತ್ಯಪ್ರಕಾಶ್ ಅವರು ಕಟ್ಟಿ ಕೊಟ್ಟಿದ್ದಾರೆ. ಅಷ್ಟೇ ಸುಂದರವಾಗಿ ದೀಪಕ್ ನಿರ್ದೇಶನ ಮಾಡಿದ್ದಾರೆ‌. ರೆಚೆಲ್ ಅವರ ಅಭಿನಯ ಅದ್ಭುತವಾಗಿದೆ‌. ನೀವು ಈ ಹಿಂದೆ ಯಾವ ಚಿತ್ರಗಳಲ್ಲೂ ನೋಡಿರದ ಸಾಧುಕೋಕಿಲ ಹಾಗೂ ಶೋಭ್ ರಾಜ್ ಅವರನ್ನು ನಮ್ಮ ಚಿತ್ರದಲ್ಲಿ ನೋಡಬಹುದು. 

ಅವಿನಾಶ್, ಭೂಮಿ ಶೆಟ್ಟಿ ಮುಂತಾದವರು ಈ ಚಿತ್ರದಲ್ಲಿದ್ದಾರೆ. ತಂತ್ರಜ್ಞರ ಕಾರ್ಯವೈಖರಿ ಕೂಡ ಚೆನ್ನಾಗಿದೆ. ಇತ್ತೀಚಿಗೆ ಟೆಕ್ನಿಕಲ್ ಶೋ ನಲ್ಲಿ ಚಿತ್ರ ನೋಡಿದಾಗ ಎಲ್ಲರ ಮುಖದಲ್ಲಿ ಭರವಸೆಯ ನಗು ಮೂಡಿತ್ತು. ಆ ನಗು ಪ್ರೇಕ್ಷಕನ ಮುಖದಲ್ಲೂ ಮೂಡಲಿದೆ ಎಂಬ ಭರವಸೆ ಇದೆ ಎಂದರು ನಾಯಕ ಮಿಲಿಂದ್.    

'ದೀಪಕ್ ಅವರು ಈ ಚಿತ್ರದ ಕಥೆ ಹೇಳಿದಾಗಲೇ ಈ ಚಿತ್ರದಲ್ಲಿ  ನಿರ್ಧರಿಸಿದ್ದೆ. ಅಷ್ಟು ಸುಂದರ ಕಥಾನಕವಿದು. ನಡೆಸಬೇಕೆಂದು ಚಿತ್ರದಲ್ಲಿ ನಾನು ಪ್ರಾಚ ಶಾಸ್ತ್ರಜ್ಞೆ. ಜಾನಕಿ ನನ್ನ ಪಾತ್ರದ ಹೆಸರು' ಎಂದರು ನಾಯಕಿ ರೆಚೆಲ್ ಡೇವಿಡ್. ಹೆಚಿಚ್ಇನ ಮಾಹಿತಿಗೆ ವಿಡಿಯೋ ನೋಡಿ..