Asianet Suvarna News Asianet Suvarna News

Vijayanand Movie: ಇಂದು ಜಗತ್ತಿನಾದ್ಯಂತ 'ವಿಜಯಾನಂದ' ಸಿನಿಮಾ ರಿಲೀಸ್...

ಡಾ. ವಿಜಯ ಸಂಕೇಶ್ವರ್ ಜೀವನ ಆಧರಿಸಿ ತಯಾರಾಗಿರುವ ವಿಜಯಾನಂದ ಸಿನಿಮಾ ಇಂದು ಜಗತ್ತಿನಾದ್ಯಂತ ಬಿಡುಗಡೆ ಆಗಿದೆ.

ವಿಜಯಾನಂದ ಸಿನಿಮಾ ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆ ಆಗಿದೆ. ಹಿಂದೆ ‘ಟ್ರಂಕ್’ ಎಂಬ ಸಿನಿಮಾ ನಿರ್ದೇಶಿಸಿದ್ದ ರಿಷಿಕಾ ಶರ್ಮ, ‘ವಿಜಯಾನಂದ’ ಚಿತ್ರಕ್ಕೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ವಿಜಯ್ ಸಂಕೇಶ್ವರ್ ಪಾತ್ರದಲ್ಲಿ ನಟ ನಿಹಾಲ್ ರಜಪೂತ್ ಅಬಿನಯಿಸಿದ್ದು, ಅನಂತ್ ನಾಗ್, ರವಿಚಂದ್ರನ್, ವಿನಯಾ ಪ್ರಸಾದ್, ಸಿರಿ ಪ್ರಹ್ಲಾದ್, ಅರ್ಚನಾ ಕೊಟ್ಟಿಗೆ, ಪ್ರಕಾಶ್ ಬೆಳವಾಡಿ, ಭರತ್ ಬೋಪಣ್ಣ, ಶೈನ್ ಶೆಟ್ಟಿ, ದಯಾಳ್ ಪದ್ಮನಾಭನ್, ರಮೇಶ್ ಭಟ್ ಸೇರಿದಂತೆ ದೊಡ್ಡ ಸ್ಟಾರ್ ಕಾಸ್ಟ್ ಸಿನಿಮಾದಲ್ಲಿದೆ. ಭಾರತದ ಅತೀ ದೊಡ್ಡ ಲಾಜಿಸ್ಟಿಕ್ಸ್ ಕಂಪನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ವಿಆರ್'ಎಲ್ ಸಂಸ್ಥೆಯ ಮಾಲೀಕ ವಿಜಯ ಸಂಕೇಶ್ವರ ಅವರ ಸಾಹಸಮಯ ಕಥೆಗೆ ವಿಜಯ್ ಸಂಕೇಶ್ವರ ಮಗ ಆನಂದ ಸಂಕೇಶ್ವರ ಬಂಡವಾಳ ಹೂಡಿದ್ದಾರೆ. ಈ ಸಿನಿಮಾ ಜಗತ್ತಿನಾದ್ಯಂತ 1200ಕ್ಕೂ ಹೆಚ್ಚಿನ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ.