Asianet Suvarna News Asianet Suvarna News

Abhishek Ambareesh Wedding: ಅಂಬರೀಷ್ ನನಗೆ ದೊಡ್ಡಣ್ಣ: ಅಭಿಷೇಕ್ ಮದ್ವೆಲಿ ನರೇಶ್-ಪವಿತ್ರಾ ಜೋಡಿ

ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಮದುವೆಗೆ ನರೇಶ್ ಮತ್ತು ಪವಿತ್ರಾ ಲೋಕೇಶ್ ಜೋಡಿ ಭಾಗಿಯಾಗಿ ಶುಭಹಾರೈಸಿದ್ದಾರೆ. 

ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಷ್ ಬಹುಕಾಲದ ಗೆಳತಿ ಅವಿವಾ ಬಿಡಪ ಜೊತೆ ಇಂದು (ಜೂನ್ 5) ದಾಂಪತ್ಯಕ್ಕೆ ಕಾಲಿಟ್ಟರು. ಇಂದು ಬೆಳಗ್ಗೆ 9:30 ರಿಂದ 10:30 ವರೆಗೆ ನಡೆದ ಮುಹೂರ್ತದಲ್ಲಿ ಅಭಿಷೇಕ್ ಮತ್ತು ಅವಿವಾ ಪತಿ-ಪತ್ನಿಯರಾದರು. ಅಭಿ-ಅವಿವಾ ಮದುವೆಗೆ ಅನೇಕ ಗಣ್ಯರು ಹಾಜರಾಗಿ ಶುಭಹಾರೈಸಿದ್ದಾರೆ. ಮತ್ತೆ ಮದುವೆ ಮೂಲಕ ಸದ್ದು ಮಾಡುತ್ತಿರುವ ನಟಿ ಪವಿತ್ರಾ ಲೋಕೇಶ್ ಮತ್ತು ನರೇಶ್ ಜೋಡಿ ಭಾಗಿಯಾಗಿದ್ದರು. ಮಾಧ್ಯಮದ ಜೊತೆ ಮಾತನಾಡಿದ ನರೇಶ್ ಅಂಬರೀಷ್ ನನಗೆ ದೊಡ್ಡಣ್ಣ ಎಂದು ಹೇಳಿದ್ದಾರೆ. 

Video Top Stories