Asianet Suvarna News Asianet Suvarna News

Salaar ನೋಡಿ ಥ್ರಿಲ್ಲಾದ ನಿರ್ಮಾಪಕ ವಿಜಯ್ ಕಿರಗಂದೂರು: ಸಲಾರ್ ಟ್ರೈಲರ್ ಸೃಷ್ಟಿಸಿದೆ ಸುಂಟರಗಾಳಿ!

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಲಾರ್ ಸಿನಿಮಾದ ಟ್ರೈಲರ್ ಇಂದು ಸಂಜೆ 7.19ಕ್ಕೆ ರಿಲೀಸ್ ಆಗಲಿದೆ. ಅದಕ್ಕೂ ಮುನ್ನ ಚಿತ್ರದ ನಿರ್ಮಾಪಕ ವಿಜಯ ಕಿರಗಂದೂರ ಟ್ರೈಲರ್ ಅನ್ನು ವೀಕ್ಷಣೆ ಮಾಡಿದ್ದು, ಟ್ರೈಲರ್ ಕಂಡು ಸಂಭ್ರಮಿಸಿದ್ದಾರೆ. 

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಲಾರ್ ಸಿನಿಮಾದ ಟ್ರೈಲರ್ ಇಂದು ಸಂಜೆ 7.19ಕ್ಕೆ ರಿಲೀಸ್ ಆಗಲಿದೆ. ಅದಕ್ಕೂ ಮುನ್ನ ಚಿತ್ರದ ನಿರ್ಮಾಪಕ ವಿಜಯ ಕಿರಗಂದೂರ ಟ್ರೈಲರ್ ಅನ್ನು ವೀಕ್ಷಣೆ ಮಾಡಿದ್ದು, ಟ್ರೈಲರ್ ಕಂಡು ಸಂಭ್ರಮಿಸಿದ್ದಾರೆ. ಆ ಫೋಟೋವನ್ನು ಅಲ್ಲಿದ್ದವರು ಸೆರೆ ಹಿಡಿದಿದ್ದಾರೆ. ಅದ್ಭುತವಾದ ಟ್ರೈಲರ್ ಇದಾಗಿದ್ದು, ಮೂರುವರೆ ನಿಮಿಷಕ್ಕೂ ಹೆಚ್ಚು ಅವಧಿಯ ಟ್ರೈಲರ್ ಇದಾಗಿದೆ. ಈ ಮೂಲಕ ಪ್ರೇಕ್ಷಕರ ಕುತೂಹಲವನ್ನು ಇನ್ನೂ ಹೆಚ್ಚಿಸಿದ್ದಾರೆ. ಯಂಗ್ ರೆಬೆಲ್ ಸ್ಟಾರ್ ಪ್ರಭಾಸ್ ಅಭಿನಯದ ಭರವಸೆಯ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ ನಿರೀಕ್ಷಿತ ಚಿತ್ರ 'ಸಲಾರ್'. ಇದು ಎರಡು ಭಾಗಗಳಲ್ಲಿ ತಯಾರಾಗುತ್ತಿದ್ದು, ಮೊದಲ ಭಾಗ ಡಿಸೆಂಬರ್ 22 ರಂದು ಬಿಡುಗಡೆಯಾಗಲಿದೆ. ಹೊಂಬಾಳೆ ಫಿಲಂಸ್ನ ಸಲಾರ್: ಭಾಗ 1 – ಕದನ ವಿರಾಮ ಚಿತ್ರದಲ್ಲಿ ಪ್ರಭಾಸ್, ಪೃಥ್ವಿರಾಜ್ ಸುಕುಮಾರನ್, ಶ್ರುತಿ ಹಾಸನ್ ಮತ್ತು ಜಗಪತಿ ಬಾಬು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. 

ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರದ ಟ್ರೈಲರ್ ನೋಡಲು ಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದಾರೆ. ಸಲಾರ್ ರೀಮೇಕ್ ಅಲ್ಲವೇ ಅಲ್ಲ ಅಂದಿದ್ದಾರೆ ಪ್ರಶಾಂತ್ ನೀಲ್.ಸಲಾರ್ ಸಿನಿಮಾದ ಕಥೆಯ ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ಪ್ರಶಾಂತ್ ನೀಲ್  ಈ ಹಿಂದೆ ಕನ್ನಡದಲ್ಲಿ ಮಾಡಿದ್ದ ಉಗ್ರಂ ಸಿನಿಮಾವನ್ನೇ ಕೊಂಚ ಬದಲಿಸಿಕೊಂಡು ಚಿತ್ರ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಈ ಕುರಿತಂತೆ ಪ್ರಶಾಂತ್ ನೀಲ್ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೇ ಮೊದಲ ಬಾರಿಗೆ ಕಥೆಯ ಬಗ್ಗೆ ಪ್ರಶಾಂತ್ ಮಾತನಾಡಿದ್ದು.. ಇದು ರಿಮೇಕ್ ಸಿನಿಮಾವಲ್ಲ, ಸ್ನೇಹಿತರಿಬ್ಬರು ದೊಡ್ಡ ಶತ್ರುಗಳಾಗಿ ಬದಲಾಗುವ ಕಥೆಯನ್ನು ಸಿನಿಮಾದಲ್ಲಿ ತೋರಿಸಲಾಗುತ್ತಿದೆ ಎಂದಿದ್ದಾರೆ. ಈ ಇಬ್ಬರ ಜರ್ನಿಯನ್ನು ಎರಡು ಭಾಗವಾಗಿ ತೋರಿಸಲಾಗುವುದು ಎಂದು ಇದೇ ಮೊದಲ ಬಾರಿಗೆ ಕಥೆಯ ಬಗ್ಗೆ ಬಾಯ್ಬಿಟ್ಟಿದ್ದಾರೆ. ಹಾಗೆಯೇ.. ಯಾವುದೇ ನಿರೀಕ್ಷೆ ಇಲ್ಲದೆ ಸಿನಿಮಾ ನೊಡಿ ಎಂದಿದ್ದಾರೆ. ಇದೆಲ್ಲವೂ ಇದೀಗ ಪ್ರೇಕ್ಷಕರಲ್ಲಿ ಟ್ರೈಲರ್ ನೋಡಲು ಇನ್ನಷ್ಟು ಕುತೂಹಲ ಮೂಡಿಸಿದೆ.