ನಾನು ಮಾತಾಡೋದು ಕಡಿಮೆ, ಈ ಸಿನಿಮಾದಲ್ಲಿ ಹೆಚ್ಚು ಮಾತಾಡ್ತೇನೆ: ಪೃಥ್ವಿ ಅಂಬರ್

ಸ್ಯಾಂಡಲ್‌ವುಡ್‌ನಲ್ಲಿ ಹೊಸ ಸಿನಿಮಾ ಸೆಟ್ಟೇರಿದ್ದು, ಚಿತ್ರಕ್ಕೆ 'ಭುವನಂ ಗಗನಂ' ಎಂದು ಟೈಟಲ್ ಇಡಲಾಗಿದೆ. ಅಂದಹಾಗೆ ಈ ಸಿನಿಮಾದಲ್ಲಿ ದಿಯಾ ಸಿನಿಮಾ ಖ್ಯಾತಿಯ ಪೃಥ್ವಿ ಅಂಬರ್ ಮತ್ತು ಪ್ರಮೋದ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ನಟ ಪೃಥ್ವಿ ಅಂಬರ್ ಚಿತ್ರದ ಬಗ್ಗೆ ಮಾತನಾಡಿದ್ದಾರೆ.

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ನಲ್ಲಿ ಹೊಸ ಸಿನಿಮಾ ಸೆಟ್ಟೇರಿದ್ದು, ಚಿತ್ರಕ್ಕೆ 'ಭುವನಂ ಗಗನಂ' ಎಂದು ಟೈಟಲ್ ಇಡಲಾಗಿದೆ. ಅಂದಹಾಗೆ ಈ ಸಿನಿಮಾದಲ್ಲಿ ದಿಯಾ ಸಿನಿಮಾ ಖ್ಯಾತಿಯ ಪೃಥ್ವಿ ಅಂಬರ್ ಮತ್ತು ಪ್ರಮೋದ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಎಸ್‌ವಿಸಿ ಫಿಲ್ಮಂಸ್ ಎಂಬ ಪ್ರೊಡಕ್ಷನ್ ಹೌಸ್‌ನಲ್ಲಿ ಎಂ.ಮುನೇಗೌಡ ನಿರ್ಮಾಣದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ ನಟ ಪೃಥ್ವಿ ಅಂಬರ್, ಯಾವುದೇ ಸಿನಿಮಾವಾಗಲಿ ಫ್ಯಾಷನೇಟೇಡ್ ನಿರ್ಮಾಪಕರು, ನಿರ್ದೇಶಕರು ಬೇಕು. ಈ ಸಿನಿಮಾದಲ್ಲಿ ಎರಡು ಇದೆ. ನಿರ್ದೇಶಕರ ಜೊತೆ ಈ ಹಿಂದೆ ಕೆಲಸ ಮಾಡಿದ್ದೇನೆ. ನನಗೆ ಟೈಟಲ್ ಬಹಳ ಇಷ್ಟವಾಯ್ತು. ನನ ಹೆಸ್ರು ಅರ್ಥ ಕೂಡ 'ಭುವನಂ ಗಗನಂ'. ಕಥೆ ಕೇಳಿದಾಗ ನನಗೆ ಬಹಳ ಕನೆಕ್ಟ್ ಆಗಿತ್ತು. ಪ್ರಮೋದ್ ಅದ್ಭುತ ಕಲಾವಿದ. ಇಡೀ ತಂಡದ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ಖುಷಿ ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

Related Video