Puneeth Rajkumar: ಪುನೀತ್‌ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

Puneeth Rajkumar: ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಮರಣೋತ್ತರವಾಗಿ ದಿವಂಗತ ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಪ್ರದಾನ ಮಾಡಲಾಯಿತು.

First Published Nov 1, 2022, 5:49 PM IST | Last Updated Nov 1, 2022, 5:53 PM IST

ಬೆಂಗಳೂರು (ನ. 01): ರಾಜ್ಯ ಸರ್ಕಾರ ನೀಡುವ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಮರಣೋತ್ತರವಾಗಿ ದಿವಂಗತ ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮಂಗಳವಾರ ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನೀತ್‌ ರಾಜ್‌ಕುಮಾರ್‌ ಪತ್ನಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಸಮಾರಂಭದಲ್ಲಿ ತಮಿಳಿನ ನಟ ರಜನಿಕಾಂತ್‌ ಮತ್ತು ತೆಲುಗಿನ ಜ್ಯೂನಿಯರ್‌ ಎನ್‌.ಟಿ.ಆರ್‌. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದಾರೆ.

Video Top Stories