
ಪ್ರಕೃತಿಯ 'ಅಪ್ಪು'ಗೆಯಲಿ ಪವರ್ ಸ್ಟಾರ್: ಇದು ಗಂಧದ ಗುಡಿ..!
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಗಂಧದ ಗುಡಿ ಟ್ರೈಲರ್ ರಿಲೀಸ್ ಆಗಿದ್ದು, ದೇಶಾದ್ಯಂತ ಭಾರೀ ಮೆಚ್ಚುಗೆ ಗಳಿಸುತ್ತಿದೆ. ಈ ಡಾಕ್ಯುಮೆಂಟರಿ ಟ್ರೈಲರ್ ಪ್ರೇಕ್ಷಕರನ್ನು ಬೇರೆ ಲೋಕಕ್ಕೆ ಕರೆದುಕೊಂಡು ಹೋಗುತ್ತದೆ. ಅರಣ್ಯದ ದೃಶ್ಯ ವೈಭವ ವಾವ್ ಎನಿಸುವಂತಿದೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕನಸಿನ ಡಾಕ್ಯುಮೆಂಟರಿ ಸಿನಿಮಾ, 'ಗಂಧದ ಗುಡಿ' ಟ್ರೈಲರ್ ರಿಲೀಸ್ ಆಗಿದೆ. ಬೆಂಗಳೂರಿನ ನರ್ತಕಿ ಚಿತ್ರಮಂದಿರದಲ್ಲಿ, ಪಿಆರ್‌ಕೆ ಸ್ಟುಡಿಯೋ 'ಗಂಧದ ಗುಡಿ'ಯ ಟ್ರೈಲರ್ ಬಿಡುಗಡೆ ಮಾಡಿದೆ. ಈ ಸಾಕ್ಷ್ಯ ಚಿತ್ರವನ್ನು ವೈಲ್ಡ್ ಕರ್ನಾಟಕ ಖ್ಯಾತಿಯ ನಿರ್ದೇಶಕ ಅಮೋಘವರ್ಷ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಕೇವಲ ಕಾಡುಗಳು ಮಾತ್ರವಲ್ಲದೆ ನದಿ, ಬೆಟ್ಟ ಗುಡ್ಡಗಳು ಸೇರಿದಂತೆ ಹಲವು ಮಾಹಿತಿಗಳನ್ನು ಹಂಚಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಪುನೀತ್ ಪತ್ನಿ ಅಶ್ವಿನಿ, ರಾಘಣ್ಣ ಸೇರಿದಂತೆ ಹಲವರು ಭಾಗಿಯಾಗಿದ್ದರು. ಇನ್ನು ಟ್ರೈಲರ್ ನೋಡಿ ಪ್ರಧಾನಿ ಮೋದಿಯಿಂದ ಹಿಡಿದು ಅನೇಕ ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ