Puneeth Rajkumar: PRK ಪ್ರೊಡಕ್ಷನ್‌ ಕೆಲಸಗಳು ಆರಂಭ

ಶ್ರೀ ಪುನೀತ್ ರಾಜ್‌ಕುಮಾರ್ ರವರು ನಮಗೆ ನೀಡಿರುವ ಉತ್ಸಾಹ ಮತ್ತ ಸ್ಫೂರ್ತಿಯೊಂದಿಗೆ ಪಿ.ಆರ್.ಕೆ.ಪ್ರೊಡಕ್ಷನ್ಸ್ ಮತ್ತು ಪಿ.ಆರ್‌.ಕೆ.ಆಡಿಯೋದ ಮೂಲಕ ಉಜ್ವಲ ಭವಿಷ್ಯವನ್ನು ರಚಿಸಲು ಎದುರು ನೋಡುತ್ತೇವೆ. ನಮ್ಮ ಈ ಪ್ರಯಾಣವನ್ನು ಪುನರಾರಂಭಿಸುತ್ತಾ ಅವರ ಕನಸುಗಳನ್ನು ನನಸಾಗಿಸುವಲ್ಲಿ ನಿಮ್ಮ ಬೆಂಬಲವನ್ನು ನಾವು ನಿರೀಕ್ಷಿಸುತ್ತೇವೆ’’ ಎಂದು ಪಿ.ಆರ್.ಕೆ.ಪ್ರೊಡಕ್ಷನ್ಸ್ ಸಂಸ್ಥೆ ಟ್ವೀಟ್ ಮಾಡಿದೆ.

First Published Nov 21, 2021, 1:40 PM IST | Last Updated Nov 21, 2021, 2:01 PM IST

ಪುನೀತ್ ರಾಜ್‌ಕುಮಾರ್(Puneeth Rajkumar) ನಿಧನದ ಬಳಿಕ ಪಿ.ಆರ್‌.ಕೆ.ಪ್ರೊಡಕ್ಷನ್ಸ್ ಮುನ್ನಡೆಸುವವರು ಯಾರು ಎಂಬ ಪ್ರಶ್ನೆ ಹಲವರಿಗೆ ಕಾಡಿತ್ತು. ಅಸಲಿಗೆ, ಪಿ.ಆರ್.ಕೆ.ಪ್ರೊಡಕ್ಷನ್ಸ್(PRK Productions) ಸ್ಥಾಪನೆಯಾದಾಗಿನಿಂದಲೂ ಅದನ್ನ ಮ್ಯಾನೇಜ್ ಮಾಡುತ್ತಿದ್ದವರು ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್. ಈಗಲೂ ಪಿ.ಆರ್.ಕೆ.ಪ್ರೊಡಕ್ಷನ್ಸ್ ಹಾಗೂ ಪಿ.ಆರ್.ಕೆ.ಆಡಿಯೋ ಸಂಸ್ಥೆಯನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರೇ ಮುನ್ನಡೆಸಲಿದ್ದಾರೆ. ಪುನೀತ್ ರಾಜ್‌ಕುಮಾರ್ ದೈಹಿಕವಾಗಿ ಜೊತೆಯಲ್ಲಿ ಇಲ್ಲದೇ ಇದ್ದರೂ, ಅವರ ಸ್ಫೂರ್ತಿಯೊಂದಿಗೆ, ಅಪ್ಪು ಕಂಡಿದ್ದ ಕನಸನ್ನು ನನಸಾಗಿಸಲು ಪಿ.ಆರ್.ಕೆ.ಪ್ರೊಡಕ್ಷನ್ಸ್ ಸಂಸ್ಥೆಯನ್ನು ಮುನ್ನಡೆಸುವ ಜವಾಬ್ದಾರಿಯನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೊತ್ತಿದ್ದಾರೆ.ಪುನೀತ್ ರಾಜ್‌ಕುಮಾರ್ ನಿಧನದ ಬಳಿಕ ಇದೇ ಮೊದಲ ಬಾರಿಗೆ ಪಿ.ಆರ್.ಕೆ.ಪ್ರೊಡಕ್ಷನ್ಸ್ ಸಂಸ್ಥೆ ಟ್ವೀಟ್ ಮಾಡಿದ್ದು, ತಮ್ಮ ಸಂಸ್ಥೆಯ ಪ್ರಯಾಣವನ್ನು ಪುನರಾರಂಭಿಸುವುದಾಗಿ ತಿಳಿಸಿದೆ.‘’ನಮಗೆ ಹಿಂದಿನದನ್ನು ಬದಲಿಸುವುದು ಅಸಾಧ್ಯವಾಗಿದೆ.

Puneeth Namana; ಭಾರತ ಸಿನಿ ದಿಗ್ಗಜರಿಂದ ಪುನೀತ್‌ಗೆ ಗೀತ ನಮನ, ನೋವು ತಡೆಯಲಾಗದೆ ಅತ್ತ ಶಿವಣ್ಣ, ರಾಘಣ್ಣ!

ಆದರೆ, ಶ್ರೀ ಪುನೀತ್ ರಾಜ್‌ಕುಮಾರ್ ರವರು ನಮಗೆ ನೀಡಿರುವ ಉತ್ಸಾಹ ಮತ್ತ ಸ್ಫೂರ್ತಿಯೊಂದಿಗೆ ಪಿ.ಆರ್.ಕೆ.ಪ್ರೊಡಕ್ಷನ್ಸ್ ಮತ್ತು ಪಿ.ಆರ್‌.ಕೆ.ಆಡಿಯೋದ ಮೂಲಕ ಉಜ್ವಲ ಭವಿಷ್ಯವನ್ನು ರಚಿಸಲು ಎದುರು ನೋಡುತ್ತೇವೆ. ನಮ್ಮ ಈ ಪ್ರಯಾಣವನ್ನು ಪುನರಾರಂಭಿಸುತ್ತಾ ಅವರ ಕನಸುಗಳನ್ನು ನನಸಾಗಿಸುವಲ್ಲಿ ನಿಮ್ಮ ಬೆಂಬಲವನ್ನು ನಾವು ನಿರೀಕ್ಷಿಸುತ್ತೇವೆ’’ ಎಂದು ಪಿ.ಆರ್.ಕೆ.ಪ್ರೊಡಕ್ಷನ್ಸ್ ಸಂಸ್ಥೆ ಟ್ವೀಟ್ ಮಾಡಿದೆ. ’ಕನ್ನಡ ಚಿತ್ರರಂಗಕ್ಕೆ ಅಪ್ಪು ಅವರ ಹೆಸರಲ್ಲಿ ಇನ್ನೂ ನೂರಾರು ಕಾಲ ಒಳ್ಳೆಯ ಚಿತ್ರಗಳನ್ನು ಕೊಡುಗೆಯಾಗಿ ನೀಡಿ ಎನ್ನುವುದು ನಮ್ಮೆಲ್ಲರ ಆಶಯ. ನಾವೆಲ್ಲರೂ ನಿಮ್ಮೊಟ್ಟಿಗೆ ಇದ್ದೇವೆ. ಅಪ್ಪು ಕಂಡ ಕನಸು ಮತ್ತು ಆಲೋಚನೆಯೊಂದಿಗೆ ಕೆಲಸ ಮುಂದುವರೆಸಿ’’ ಎಂದಿದ್ದಾರೆ ಅಭಿಮಾನಿಗಳು