ಜಡೆ ಜಗಳ ಕೊನೆಗೂ ಮುಕ್ತಾಯ: ಏನಿದು ರಶ್ಮಿಕಾ- ಐಶ್ವರ್ಯಾ ಜಗಳ ?

ದೊಡ್ಡದಾಗಿ ಬೆಳೆಯಬಹುದಾಗಿದ್ದ ಜಗಳವನ್ನು ನಟಿ ರಶ್ಮಿಕಾ ಮಂದಣ್ಣ ಮತ್ತು ಐಶ್ವರ್ಯಾ ರಾಜೇಶ್‌ ಅಂತ್ಯಗೊಳಿಸಿದ್ದಾರೆ.

Share this Video
  • FB
  • Linkdin
  • Whatsapp

ಖ್ಯಾತ ನಟಿ ಐಶ್ವರ್ಯಾ ರಾಜೇಶ್ ಅವರು ಹಲವಾರು ಸಿನಿಮಾಗಳಲ್ಲಿ ನಟಿಸಿ ಜನಪ್ರಿಯತೆ ಪಡೆದಿದ್ದಾರೆ. ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಅವರು ಸಕ್ರಿಯರಾಗಿದ್ದಾರೆ. ಕೆಲವೇ ದಿನಗಳ ಹಿಂದೆ ರಶ್ಮಿಕಾ ಮಂದಣ್ಣ ಬಗ್ಗೆ ಅವರು ಆಡಿದ ಮಾತುಗಳು ವಿವಾದಕ್ಕೆ ಎಡೆಮಾಡಿಕೊಟ್ಟಿದ್ದವು. ‘ಪುಷ್ಪ ಸಿನಿಮಾದಲ್ಲಿನ ಶ್ರೀವಲ್ಲಿ ಪಾತ್ರವನ್ನು ರಶ್ಮಿಕಾ ಮಂದಣ್ಣ ಅವರಿಗಿಂತ ನಾನೇ ಚೆನ್ನಾಗಿ ಮಾಡುತ್ತಿದ್ದೆ’ ಎಂದು ಐಶ್ವರ್ಯಾ ರಾಜೇಶ್ ಹೇಳಿದ್ದರು ಎಂದು ಸುದ್ದಿ ಆಗಿತ್ತು. ಆದರೆ ತಾವು ಆ ರೀತಿ ಹೇಳಿಯೇ ಇಲ್ಲ ಎಂದು ಐಶ್ವರ್ಯಾ ರಾಜೇಶ್ ಸ್ಪಷ್ಟನೆ ನೀಡಿದ್ದರು. ಅದು ಈಗ ರಶ್ಮಿಕಾ ಮಂದಣ್ಣ ಅವರ ಗಮನಕ್ಕೆ ಬಂದಿದೆ. ಅದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ದೊಡ್ಡದಾಗಿ ಬೆಳೆಯಬಹುದಾಗಿದ್ದ ಜಗಳವನ್ನು ಅವರು ಅಂತ್ಯಗೊಳಿಸಿದ್ದಾರೆ. ಯಾವುದೇ ಕಿರಿಕ್‌ಗೆ ಅವಕಾಶ ನೀಡದಂತೆ ಸ್ನೇಹದ ಹಸ್ತ ಚಾಚಿದ್ದಾರೆ. ‘ಹಾಯ್ ಲವ್.. ಈಗ ತಾನೇ ಇದನ್ನು ನೋಡಿದೆ. ವಿಷಯವೆಂದರೆ.. ನೀವು ಏನು ಹೇಳುತ್ತಿದ್ದೀರಿ ಎಂಬುದನ್ನು ನಾನು ಸಂಪೂರ್ಣವಾಗಿ ಅರ್ಥಮಾಡಿಕೊಂಡಿದ್ದೇನೆ. ನಾವು ಏನು ಎಂಬುದನ್ನು ವಿವರಿಸಬೇಕಾದ ಅವಶ್ಯಕತೆ ಇಲ್ಲ. ನಿಮಗೆ ತಿಳಿದಿರುವಂತೆ ನನಗೆ ನಿಮ್ಮ ಬಗ್ಗೆ ಪ್ರೀತಿ ಮತ್ತು ಗೌರವವಿದೆ. ನಿಮ್ಮ ‘ಫರ್ಹಾನಾ’ ಚಿತ್ರಕ್ಕೆ ಒಳ್ಳೆಯದಾಗಲಿ’ಎಂದು ರಶ್ಮಿಕಾ ಮಂದಣ್ಣ ಟ್ವೀಟ್ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ವೀಕ್ಷಿಸಿ: Today Horoscope: ಶನಿವಾರದ ವಾರ ಭವಿಷ್ಯ : ಅಮೃತ ಸಿದ್ಧಿಫಲವಿದ್ದು, ಶುಭಕಾರ್ಯಗಳಿಗೆ ಈ ದಿನ ಉತ್ತಮ

Related Video