Asianet Suvarna News Asianet Suvarna News

ಶ್ರೀನಗರ ಕಿಟ್ಟಿ- ರಚಿತಾ ರಾಮ್ ವಿವಾಹ ವಾರ್ಷಿಕೋತ್ಸವ: ಸಂಜು, ಗೀತಾ ಜೊತೆ ತುಪ್ಪದ ಬೆಡಗಿ ಡ್ಯಾನ್ಸ್​!

ಶ್ರೀನಗರ ಕಿಟ್ಟಿ ಹಾಗೂ ಗುಳಿಕೆನ್ನೆ ಬೆಡಗಿ  ರಚಿತಾರಾಮ್ ಪ್ರಧಾನ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದ ಹಾಡೊಂದರ ಚಿತ್ರೀಕರಣ ಇತ್ತೀಚೆಗೆ ನಡೆಯಿತು. ನಾಯಕ ಸಂಜು ಹಾಗೂ ನಾಯಕಿ ಗೀತಾ ಇಬ್ಬರ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ಬರುವ ಪಾರ್ಟಿ ಸಾಂಗ್ ಇದಾಗಿದೆ. 
 

ಅರಮನೆ, ಮೈನ, ಸಂಜು ವೆಡ್ಸ್ ಗೀತಾದಂತಹ ಎಮೋಷನಲ್ ಲವ್ ಸ್ಟೋರಿಗಳನ್ನು ಕೊಟ್ಟಿದ್ದ ನಿರ್ದೇಶಕಮೂಡಿಸಿದ ನಿರ್ದೇಶಕ ನಾಗಶೇಖರ್ ಇದೀಗ ಕನ್ನಡ ಸಿನಿರಸಿಕರಿಗಾಗಿ ಮತ್ತೊಂದು ಅದ್ಭುತ ಪ್ರೇಮ ಸ್ಟೋರಿಯನ್ನು ಹೇಳಹೊರಟಿದ್ದಾರೆ. ದಶಕದ ಹಿಂದೆ ತಮ್ಮದೇ ನಿರ್ದೇಶನದಲ್ಲಿ ತೆರೆಕಂಡು, ಜನಮನ ಸೂರೆಗೊಂಡು ಯಶಸ್ವಿಯಾಗಿದ್ದ ಸಂಜು ವೆಡ್ಸ್  ಗೀತಾ ಚಿತ್ರದ ಟೈಟಲ್ ಹೊಸ ಪ್ರೇಮಕಥೆ  ಹೆಣೆದು ಸಂಜು ವೆಡ್ಸ್ ಗೀತಾ-2 ಚಿತ್ರವನ್ನು  ತೆರೆಗೆ ತರುತ್ತಿದ್ದಾರೆ.  ಶ್ರೀನಗರ ಕಿಟ್ಟಿ ಹಾಗೂ ಗುಳಿಕೆನ್ನೆ ಬೆಡಗಿ ರಚಿತಾ ರಾಮ್ ಪ್ರಧಾನ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದ ಹಾಡೊಂದರ ಚಿತ್ರೀಕರಣ ಇತ್ತೀಚೆಗೆ ನಡೆಯಿತು. ನಾಯಕ ಸಂಜು ಹಾಗೂ ನಾಯಕಿ ಗೀತಾ ಇಬ್ಬರ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ಬರುವ ಪಾರ್ಟಿ ಸಾಂಗ್ ಇದಾಗಿದೆ. 

ಖ್ಯಾತ ಗಾಯಕಿ ಮಂಗ್ಲಿ ಈ ಹಾಡಿಗೆ ದನಿಯಾಗಿದ್ದು, ಭಜರಂಗಿ ಮೋಹನ್ ಅವರು ಕೊರಿಯೋಗ್ರಾಫ್ ಮಾಡಿದ್ದಾರೆ. ಕುಂಬಳಗೋಡಿನ ಬಿಜಿಎಸ್ ಹೈಸ್ಕೂಲಿನ ಗ್ಲಾಸ್ ಹೌಸ್ ನಲ್ಲಿ ಈ ಹಾಡಿನ ಚಿತ್ರೀಕರಣ ನಡೆಯಿತು. 200 ರಿಂದ 250 ಜನ ಡಾನ್ಸರ್ಸ್ ಈ ಹಾಡಲ್ಲಿ ಹೆಜ್ಜೆ ಹಾಕಿದ್ದಾರೆ.. ಈ ವರ್ಷದ ಸೂಪರ್ ಹಿಟ್ ಸಾಂಗ್ ಆಗುವ ಎಲ್ಲ ಸಾಧ್ಯತೆಗಳಿವೆ. ರೇಶ್ಮೆ ನೂಲಿಗೆ ಉತ್ತಮ ಬೆಲೆ ಸಿಗಬೇಕೆಂದು ಹೋರಾಡುವ  ನಮ್ಮ ಮಣ್ಣಿನ ಪ್ರೇಮಿಗಳ ಅದ್ಭುತ ಪ್ರೇಮಕಥೆ ಈ ಚಿತ್ರದಲ್ಲಿದೆ. ಈಗಾಗಲೇ ಚಿತ್ರದ ಎಡಿಟಿಂಗ್ ಮುಗಿದು, ಡಬ್ಬಿಂಗ್ ಕೂಡ  ಕೊನೇ ಹಂತದಲ್ಲಿದೆ. ಚಿತ್ರಕ್ಕೆ  ಸ್ವಿಟ್ಜರ್ ಲ್ಯಾಂಡ್ ನಲ್ಲಿ 15 ದಿನ ಹನ್ನೊಂದು ಲೊಕೇಶನ್ ಗಳಲ್ಲಿ  ಮೂರನೇ ಹಂತದ ಚಿತ್ರೀಕರಣ ನಡೆಸಲಾಗಿದೆ. 

ಅಲ್ಲದೆ 50 ಲಕ್ಷ ರೂ.ಗಳ  ವೆಚ್ಚದಲ್ಲಿ ಕುಣಿಗಲ್ ನ ಯುಬಿ ಸ್ಟೆಡ್ ಫಾರಂ(ಕುದುರೆ ಫಾರಂ)ನಲ್ಲಿ ಸುಮಾರು 5 ದಿನಗಳವರೆಗೆ  ಅದ್ದೂರಿಯಾಗಿ ಹಾಡೊಂದನ್ನು ಚಿತ್ರೀಕರಿಸಲಾಗಿದೆ. ನಿರ್ಮಾಪಕ ಛಲವಾದಿ ಕುಮಾರ್ ಹಾಡುಗಳಿಗೇ ಅದ್ದೂರಿಯಾಗಿ ಖರ್ಚು ಮಾಡಿದ್ದಾರೆ. ನಾಗಶೇಖರ್ ಅವರ  ಕಥೆ, ಚಿತ್ರಕಥೆ ನಿರ್ದೇಶನ ಚಿತ್ರಕ್ಕಿದ್ದು   ಶ್ರೀಧರ ವಿ. ಸಂಭ್ರಮ್  5 ಹಾಡುಗಳನ್ನು ಕಂಪೋಜ್ ಮಾಡಿದ್ದಾರೆ. ಸೋನು ನಿಗಂ, ಶ್ರೇಯಾ ಘೋಷಾಲ್, ಮಂಗ್ಲಿ ದನಿಯಾಗಿದ್ದಾರೆ. ರಾಗಿಣಿ ದ್ವಿವೇದಿ, ಚೇತನ್ ಚಂದ್ರ,(ಕೆಮಿಯೋ), ರಂಗಾಯಣ ರಘು, ಸಾಧು ಕೋಕಿಲ, ತಬಲಾನಾಣಿ, ಗಿಚ್ಚಿಗಿಲಿಗಿಲಿ ವಿನೋದ್ ಅಲ್ಲದೆ ಖಳನಟ ಸಂಪತ್ ಕುಮಾರ್ ಸೇರಿದಂತೆ ಹೆಸರಾಂತ ಕಲಾವಿದರ ತಾರಾಗಣ ಈ ಚಿತ್ರಕ್ಕಿದೆ. A 24 ಕ್ರಿಯೇಶನ್ಸ್ ಥ್ರೂ ಗೋಕುಲ್ ಫಿಲಂಸ್ ಈ ಚಿತ್ರವನ್ನು ಪ್ರಪಂಚದಾದ್ಯಂತ ಬಿಡುಗಡೆ ಮಾಡುತ್ತಿದೆ.