32 ವರ್ಷಗಳ ಬಳಿಕ ಮತ್ತೆ ಒಂದಾದ ದಿಗ್ಗಜರು: ಮ್ಯಾಜಿಕ್ ಮಾಡಲಿದ್ದಾರಾ ರಜಿನಿ, ಬಿಗ್ ಬಿ..?
ರಜನಿಕಾಂತ್, ಅಮಿತಾಬ್ ಬಚ್ಚನ್ ಇದೀಗ 32 ವರ್ಷದ ಬಳಿಕ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ. ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಈ ಅಭೂತಪೂರ್ವ ಸಾಹಸಕ್ಕೆ ಕೈ ಹಾಕಿದೆ.
ಇದಪ್ಪಾ ಸುದ್ದಿಯಂದ್ರೆ ಎಂದು ಸಿನಿ ಪ್ರೇಕ್ಷಕ ಥ್ರಿಲ್ ಆಗೋ ಸುದ್ದಿಯಿದು. ಭಾರತೀಯ ಚಿತ್ರರಂಗದ ಇಬ್ಬರು ದಿಗ್ಗಜರಾದ ರಜನೀಕಾಂತ್ ಹಾಗೂ ಅಮಿತಾಬ್ ಬಚ್ಚನ್ 32 ವರ್ಷಗಳ ಬಳಿಕ ಒಟ್ಟಿಗೆ ನಟಿಸಿದ್ದಾರೆ. ಇಬ್ಬರು ಸೂಪರ್ ಸ್ಟಾರ್‌ಗಳನ್ನು ಒಟ್ಟಿಗೆ ಸೇರಿಸುವುದಕ್ಕೆ ಎಂಟು ಗುಂಡಿಗೆಯ ನಿರ್ಮಾಪಕ ಹಾಗೂ ನಿರ್ದೇಶಕರಿಗೆ ಮಾತ್ರವೇ ಸಾಧ್ಯ. ಅಂಥಹಾ ಸಾಹಸವೊಂದಕ್ಕೆ ಭಾರತೀಯ ಚಿತ್ರರಂಗ ಸಾಕ್ಷಿಯಾಗುತ್ತಿದೆ. ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಈ ಅಭೂತಪೂರ್ವ ಸಾಹಸಕ್ಕೆ ಕೈ ಹಾಕಿದೆ. ಇಂಡಿಯನ್, ಖೈದಿ ನಂಬರ್ 150, ರೋಬೋ 2.0, ದರ್ಬಾರ್ ಇತ್ತೀಚೆಗೆ ಪೊನ್ನಿಯಿನ್ ಸೆಲ್ವನ್ ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಲೈಕಾ ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಮತ್ತೆ ಕೈ ಜೋಡಿಸಿದೆ. ರಜನಿಯ 170ನೇ ಚಿತ್ರಕ್ಕೆ ಹಣ ಹೂಡುತ್ತಿದೆ. ವಿಶೇಷ ಅಂದರೆ ಈ ಸಿನಿಮಾದಲ್ಲಿ ರಜನಿ ಜೊತೆ ಬಾಲಿವುಡ್ ದಂತಕಥೆ ಅಮಿತಾಬ್ ಬಚ್ಚನ್ ಕೂಡ ನಟಿಸುತ್ತಿದ್ದಾರೆ.
ಇದನ್ನೂ ವೀಕ್ಷಿಸಿ: ಅಭಿಷೇಕ್ ಸಂಗೀತ್‌ನಲ್ಲಿ ಕುಣಿದು ಕುಪ್ಪಳಿಸಿದ ಸುಮಲತಾ, ಮಾಲಾಶ್ರೀ: ಹೇಯ್ ಜಲೀಲ ಹಾಡಿಗೆ ಸಖತ್ ಡ್ಯಾನ್ಸ್..!