ಡಿಂಗ್ರಿ ನಾಗರಾಜ್‌ ಪುತ್ರ ರಾಜವರ್ಧನ್ ಹೊಸ ಸಿನಿಮಾ 'ಪ್ರಣಯಂ': ಫೆಬ್ರವರಿ 9ಕ್ಕೆ ತೆರೆಗೆ!

ಪಲ್ಲಕ್ಕಿ, ಗಣಪ, ಪಾರಿಜಾತದಂಥ ಅದ್ಭುತ  ಚಿತ್ರಗಳನ್ನು ನೀಡಿದ ನಿರ್ಮಾಪಕ  ಪರಮೇಶ್ ಅವರೀಗ ಮತ್ತೊಂದು ಇನ್ ಟೆನ್ಸ್ ಲವ್ ಸ್ಟೋರಿಯನ್ನು ಪ್ರಣಯಂ ಚಿತ್ರದ ಮೂಲಕ ಪ್ರೇಕ್ಷಕರಿಗೆ ನೀಡಲಿದ್ದಾರೆ.  

Share this Video
  • FB
  • Linkdin
  • Whatsapp

ಪಲ್ಲಕ್ಕಿ, ಗಣಪ, ಪಾರಿಜಾತದಂಥ ಅದ್ಭುತ ಚಿತ್ರಗಳನ್ನು ನೀಡಿದ ನಿರ್ಮಾಪಕ ಪರಮೇಶ್ ಅವರೀಗ ಮತ್ತೊಂದು ಇನ್ ಟೆನ್ಸ್ ಲವ್ ಸ್ಟೋರಿಯನ್ನು ಪ್ರಣಯಂ ಚಿತ್ರದ ಮೂಲಕ ಪ್ರೇಕ್ಷಕರಿಗೆ ನೀಡಲಿದ್ದಾರೆ. ಮನಸ್ವಿ ವೆಂಚರ್ಸ್ ಹಾಗೂ ಪಿಟು ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಪರಮೇಶ್ ಅವರೇ ಕಥೆ ಬರೆದು ನಿರ್ಮಿಸಿರುವ ಈ ಚಿತ್ರಕ್ಕೆ ಎಸ್. ದತ್ತಾತ್ರೇಯ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಬಿಚ್ಚುಗತ್ತಿ ಖ್ಯಾತಿಯ ನಟ ರಾಜವರ್ಧನ್, ನೈನಾ ಗಂಗೂಲಿ ಚಿತ್ರದ ನಾಯಕ, ನಾಯಕಿಯಾಗಿ ಅಭಿನಯಿಸಿದ್ದಾರೆ. ಈ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಯೂಟ್ಯೂಬ್ನಲ್ಲಿ ಸದ್ದು ಮಾಡುತ್ತಿದೆ. ಫೆಬ್ರವರಿ 9ರಂದು ‘ಪ್ರಯಣಂ’ ತೆರೆಕಾಣಲಿದೆ. ಈ ಸಿನಿಮಾದಲ್ಲಿ ಖ್ಯಾತಿಯ ನಟ ರಾಜವರ್ಧನ್ ಗೆ ನಾಯಕಿಯಾಗಿ ನೈನಾ ಗಂಗೂಲಿ ಜೋಡಿಯಾಗಿದ್ದಾರೆ. 

Add Asianetnews Kannada as a Preferred SourcegooglePreferred

ಪ್ರಣಯಂ ಒಂದು ಗಾಢವಾದ ಪ್ರೇಮಕಥೆ. ಅದರ ಝಲಕ್ ಹೇಗಿರಲಿದೆ ಎಂಬುದನ್ನು ತಿಳಿಸಲು ಇತ್ತೀಚೆಗೆ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಎಸ್. ದತ್ತಾತ್ರೇಯ ಅವರು ಚಿತ್ರಕಥೆ ಬರೆದು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ‘ಮನಸ್ವಿ ವೆಂಚರ್ಸ್’ ಹಾಗೂ ‘ಪಿಟು ಪ್ರೊಡಕ್ಷನ್ಸ್’ ಮೂಲಕ ‘ಪ್ರಯಣಂ’ ನಿರ್ಮಾಣ ಆಗಿದೆ. ಈ ಸಿನಿಮಾಗೆ ಮನೋಮೂರ್ತಿ ಸಂಗೀತ ನೀಡಿದ್ದು, 3 ಹಾಡುಗಳಿಗೆ ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ. ಈ ಸಿನಿಮಾದಲ್ಲಿ ಒಟ್ಟು 5 ಹಾಡುಗಳು ಇವೆ. ವಿ. ನಾಗೇಶ್ ಆಚಾರ್ಯ ಛಾಯಾಗ್ರಹಣ ಮಾಡಿದ್ದಾರೆ. ನಿರ್ಮಾಪಕ ಪರಮೇಶ್ ಅವರಿಗೆ ಇರುವ ಸಿನಿಮಾ ಪ್ರೀತಿಯೇ ಪ್ರಣಯಂ ಸಿನಿಮಾ ಮಾಡುವಂತೆ ಮಾಡಿದೆ. ಈ ಶುಕ್ರವಾರ ರಾಜ್ಯಾಧ್ಯಂತ ತೆರೆಕಾಣುತ್ತಿದ್ದು ಪ್ರಣಯಂ ಸಿನಿಮಾವನ್ನು ಪ್ರೇಕ್ಷಕ ಒಪ್ಪಿ ಅಪ್ಪಿಕೊಳ್ಳಲಿದ್ದಾರೆ ಎಂಬ ಭರವಸೆಯಲ್ಲಿದೆ ಚಿತ್ರತಂಡ.

Related Video