ಆರ್‌ಸಿಬಿ ಗೆಲುವಿಗೆ ಸಂಭ್ರಮಿಸಿದ ರಿಷಬ್ ಶೆಟ್ಟಿ ಪುತ್ರಿ : ವಿಡಿಯೋ ವೈರಲ್
ರಿಷಬ್ ಮತ್ತು ಅವರ ಪುತ್ರಿ ರಾಧ್ಯಾ ಆರ್‌ಸಿಬಿ ಗೆಲುವಿಗೆ ಜೈ ಎಂದಿದ್ದಾರೆ. ಆರ್‌ಸಿಬಿ ಗೆದ್ದಿದ್ದಕ್ಕೆ ಖುಷಿಯಿಂದ ಬೀಗುತ್ತಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕೊಹ್ಲಿ ಭರ್ಜರಿ ಶತಕ ಹಾಗೂ ಫಾಫ್ ಡು ಪ್ಲೆಸಿಸ್ ಸ್ಫೋಟಕ ಅರ್ಧ ಶತಕದ ಬ್ಯಾಟಿಂಗ್ ನೆರವಿನಿಂದ ಆರ್ಸಿಬಿ ತಂಡವು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮೇ. 18ರಂದು 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಆರ್‌ಸಿಬಿ ಗೆದ್ದಿದ್ದಕ್ಕೆ ‘ಕಾಂತಾರ’ ಹೀರೋ ರಿಷಬ್ ಶೆಟ್ಟಿ ಪುತ್ರಿ ಸಂಭ್ರಮಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆರ್‌ಸಿಬಿ ತಂಡಕ್ಕೆ ದೊಡ್ಡ ಮಟ್ಟದ ಫ್ಯಾನ್ ಬೇಸ್ ಇದೆ. ಬೆಂಗಳೂರು ತಂಡ ಅಖಾಡದಲ್ಲಿದೆ ಅಂದರೆ ಕಾದು ಕೂರುವ ಅಪಾರ ಅಭಿಮಾನಿಗಳಿದ್ದಾರೆ. ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ಹೆನ್ರಿಚ್ ಕ್ಲಾಸೆನ್ ಭರ್ಜರಿ ಶತಕದೊಂದಿಗೆ 20 ಓವರ್ಗಳಲ್ಲಿ 186 ರನ್ ಗಳಿಸಿತ್ತು. 187 ರನ್‌ಗಳ ಬೃಹತ್ ಮೊತ್ತದ ಗುರಿ ಬೆನ್ನತ್ತಿದ್ದ ಆರ್ಸಿಬಿ 19.2 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿ ಗೆದ್ದು ಬೀಗಿತು. ‘ಕಾಂತಾರ’ ಸಕ್ಸಸ್ ನಂತರ ಕಾಂತಾರ 2 ಸಿನಿಮಾ ತಯಾರಿಯಲ್ಲಿದ್ದಾರೆ. ಕಥೆ ಈಗಾಗಲೇ ಸಿದ್ಧವಾಗಿದ್ದು, ಸದ್ಯದಲ್ಲೇ ಶೂಟಿಂಗ್ ಶುರುವಾಗಲಿದೆ.
ಇದನ್ನೂ ವೀಕ್ಷಿಸಿ: ಗಂಗಮ್ಮ ಜಾತ್ರೆಯಲ್ಲಿ ‘ಪುಷ್ಪ 2’ ರೀತಿ ವೇಷ ಧರಿಸಿ ಎಂಟ್ರಿ ಕೊಟ್ಟ ಸಂಸದ !