ಸ್ಯಾಂಡಲ್‌ವುಡ್‌ಗೆ ವಾಸುಕಿ ವೈಭವ್ ಗಿಫ್ಟ್; ರಿಷಬ್ ಶೆಟ್ಟಿ

ಸ್ಯಾಂಡಲ್‌ವುಡ್‌ನ ನಿರ್ದೇಶಕ, ನಟ ರಿಷಬ್ ಶೆಟ್ಟಿ ಸದ್ಯ ಹರಿಕಥೆಯಲ್ಲ ಗಿರಿ ಕಥೆ ಸಿನಿಮಾದ ರಿಲೀಸ್‌ನಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಪ್ರಮೋಷನ್ ಕೆಲಸಗಳಲ್ಲಿ ತೊಡಗಿಕೊಂಡಿರುವ ರಿಷಬ್  ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಸಿನಿಮಾದ ಸಂಗೀತದ ಬಗ್ಗೆ ಮಾತನಾಡಿರುವ ರಿಷಬ್ ಶೆಟ್ಟಿ ವಾಸುಕಿ ವೈಭವ್ ಅವರನ್ನು ಹಾಡಿ ಹೊಗಳಿದ್ದಾರೆ. ವಾಸುಕಿ ಮಾಡಿರುವ ಸಿನಿಮಾಗಳಲ್ಲಿ ಇದು ಅತ್ಯಂತ ಅದ್ಭುತವಾಗಿರುವ ಬ್ಯಾಗ್ರೌಂಡ್ ಸ್ಟೋರ್ ಎಂದು ಹೇಳಿದ್ದಾರೆ.

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ನ ನಿರ್ದೇಶಕ, ನಟ ರಿಷಬ್ ಶೆಟ್ಟಿ ಸದ್ಯ ಹರಿಕಥೆಯಲ್ಲ ಗಿರಿ ಕಥೆ ಸಿನಿಮಾದ ರಿಲೀಸ್‌ನಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಪ್ರಮೋಷನ್ ಕೆಲಸಗಳಲ್ಲಿ ತೊಡಗಿಕೊಂಡಿರುವ ರಿಷಬ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಸಿನಿಮಾದ ಸಂಗೀತದ ಬಗ್ಗೆ ಮಾತನಾಡಿರುವ ರಿಷಬ್ ಶೆಟ್ಟಿ ವಾಸುಕಿ ವೈಭವ್ ಅವರನ್ನು ಹಾಡಿ ಹೊಗಳಿದ್ದಾರೆ. ವಾಸುಕಿ ಮಾಡಿರುವ ಸಿನಿಮಾಗಳಲ್ಲಿ ಇದು ಅತ್ಯಂತ ಅದ್ಭುತವಾಗಿರುವ ಬ್ಯಾಗ್ರೌಂಡ್ ಸ್ಟೋರ್ ಎಂದು ಹೇಳಿದ್ದಾರೆ. ಕಾಮಿಡಿ ಸಿನಿಮಾಗೆ ಬ್ಯಾಗ್ರೌಂಡ್ ಸ್ಟೋರ್ ಮಾಡುವುದು ಅಷ್ಟು ಸುಲಭವಲ್ಲ, ಆದರೆ ಈ ಸಿನಿಮಾಗೆ ವಾಸುಕಿ ಅದ್ಭುತವಾಗಿ ಮಾಡಿದ್ದಾರೆ ಎಂದು ರಿಷಬ್ ಹಾಡಿ ಹೊಗಳಿದ್ದಾರೆ. ಈ ಸಿನಿಮಾದಲ್ಲಿ ರಿಷಬ್ ಜೊತೆ ಲವ್ ಮಾಕ್‌ಟೇಲ್ ಖ್ಯಾತಿಯ ನಟಿ ರಚನಾ ಕೂಡ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರಕ್ಕೆ ಕರಣ್ ಅನಂತ್ ಮತ್ತು ಅನಿರುದ್ಧ್ ಮಹೇಶ್ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಟ್ರೈಲರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಸಿನಿಮಾ ಜೂನ್ 23ರಂದು ತೆರೆಗೆ ಬರುತ್ತಿದೆ.

Add Asianetnews Kannada as a Preferred SourcegooglePreferred

Related Video