ಅಣ್ಣನ ಸಿನಿಮಾಗೆ ಶುಭ ಕೋರಲು ಬರಲೇ ಇಲ್ಲ ರಾಧಿಕಾ ಕುಮಾರಸ್ವಾಮಿ: ಯಾಕೆ ಬಂದಿಲ್ಲ ಗೊತ್ತಾ?

ರಾಧಿಕಾ ಕುಮಾರಸ್ವಾಮಿ ಸಹೋದರ ರವಿರಾಜ್ ಸಿನಿಮಾ ರಂಗಕ್ಕೆ ನಿರ್ಮಾಪಕರಾಗಿ ಈಗಾಗಲೇ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ. ಆ ಸಿನಿಮಾದ ನಿರ್ದೇಶಕ ಲೋಹಿತ್, ಚಿತ್ರದಲ್ಲಿ ನಾಯಕಿಯಾಗಿ ಪ್ರಿಯಾಂಕಾ ಉಪೇಂದ್ರ ಅವರು ನಟಿಸಲಿದ್ದಾರೆ. 

Share this Video
  • FB
  • Linkdin
  • Whatsapp

ರಾಧಿಕಾ ಕುಮಾರಸ್ವಾಮಿ ಸಹೋದರ ರವಿರಾಜ್ ಸಿನಿಮಾ ರಂಗಕ್ಕೆ ನಿರ್ಮಾಪಕರಾಗಿ ಈಗಾಗಲೇ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ. ಆ ಸಿನಿಮಾದ ನಿರ್ದೇಶಕ ಲೋಹಿತ್, ಚಿತ್ರದಲ್ಲಿ ನಾಯಕಿಯಾಗಿ ಪ್ರಿಯಾಂಕಾ ಉಪೇಂದ್ರ ಅವರು ನಟಿಸಲಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಮುಹೂರ್ತ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಎಲ್ಲರೂ ಹಾಜರಾಗಿದ್ದರು. ಆದರೆ ನಟಿ ರಾಧಿಕಾ ಕುಮಾರಸ್ವಾಮಿ ಅವರು ಮಾತ್ರ ತಮ್ಮ ಅಣ್ಣನ ಸಿನಿಮಾದ ಮುಹೂರ್ತದಲ್ಲಿ ಬಂದಿರಲಿಲ್ಲ. ಅವರನ್ನು ನೋಡಲು ಕಾದಿದ್ದ ಅಭಿಮಾನಿಗಳು ಯಾಕೆ ಬರಲಿಲ್ಲ ಎಂದು ಕೇಳುತ್ತಿದ್ದಾರೆ. 

ಅಂದಹಾಗೆ ರವಿರಾಜ್ ಅವರ ಚೊಚ್ಚಲ ನಿರ್ಮಾಣದ ಸಿನಿಮಾದಲ್ಲಿ ದೊಡ್ಡ ದೊಡ್ಡ ಸ್ಟಾರ್ಸ್ ನಟಿಸಿದ್ದಾರೆ. ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ಈ ಹಾರರ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಹಾರರ್ ಸಿನಿಮಾ ಎಂದು ಸಾಕಷ್ಟು ಕುತೂಹಲ ಮೂಡಿಸಿರುವ ರವಿರಾಜ್ ಸದ್ಯದಲ್ಲೇ ಅಭಿಮಾನಿಗಳ ಮುಂದೆ ಬರಲಿದ್ದಾರೆ. ಶ್ರೀ ದುರ್ಗಾಪರಮೇಶ್ವರಿ ಬ್ಯಾನರ್ ಮೂಲಕ ಉತ್ತಮ ಸಿನಿಮಾಗಳನ್ನು ಮಾಡುವ ಆಸೆ ಇಟ್ಟುಕೊಂಡಿದ್ದಾರೆ. ವರ್ಷಕ್ಕೆ ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಿ ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ನೀಡಬೇಕು ಎನ್ನುವುದು ಅವರ ಕನಸು.

Related Video