Asianet Suvarna News Asianet Suvarna News

ಹೈದರಾಬಾದ್‌ನಲ್ಲಿ ವೇದ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ: ಅಪ್ಪು ನೆನೆದು ಶಿವಣ್ಣ ಕಣ್ಣೀರು

ಹೈದರಾಬಾದ್‌ನಲ್ಲಿ ವೇದ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ನಡೆದಿದ್ದು, ಈ ವೇಳೆ  ಅಪ್ಪು ನೆನೆದು ಶಿವಣ್ಣ ಕಣ್ಣೀರು ಹಾಕಿದ್ದಾರೆ.

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ವೇದ ಸಿನಿಮಾ ಬಿಡುಗಡೆ ಆಗುತ್ತಿದೆ. ಹೈದರಾಬಾದ್'ನಲ್ಲಿ ವೇದ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ನಡೆದಿದ್ದು, ಈ ವೇಳೆ ಶಿವಣ್ಣ ಕಣ್ಣೀರು ಹಾಕಿದ್ದಾರೆ. ಈ ಸಿನಿಮಾದ ಪ್ರಮೋಷನ್'ಗೆ ಹೋಗಿದ್ದಾಗ ಈ ಘಟನೆ ನಡೆದಿದ್ದು, ಶಿವಣ್ಣನನ್ನ  ನಟ ಬಾಲಯ್ಯ ಸಂತೈಸಿದ್ದಾರೆ. ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ವಿಡಿಯೋ ಫೋಟೋ ಹಾಕಲಾಗಿತ್ತು. ಅದನ್ನು ನೋಡಿ ಶಿವಣ್ಣ ಕಣ್ಣೀರು ಹಾಕಿದ್ದಾರೆ.