Abhishek Ambareesh Wedding: ಅಂಬಿ ಪುತ್ರನ ಮದುವೆಗೆ ಆಗಮಿಸಿದ ಸೂಪರ್ ಸ್ಟಾರ್ ರಜನಿಕಾಂತ್
ಅಭಿಷೇಕ್ ಅಂಬರೀಷ್ ಮತ್ತು ಅವಿವಾ ಮದುವೆಗೆ ಸೂಪರ್ ಸ್ಟಾರ್ ರಜನಿಕಾಂತ್ ಆಗಮಿಸಿ ಶುಭಹಾರೈಸಿದ್ದಾರೆ.
ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಷ್ ಇಂದು (ಜೂನ್ 5) ಅದ್ದೂರಿಯಾಗಿ ದಾಂಪತ್ಯಕ್ಕೆ ಕಾಲಿಟ್ಟರು. ಫ್ಯಾಷನ್ ಡಿಸೈನರ್ ಅವಿವಾ ಬಿಡಪ ಜೊತೆ ಅಭಿಷೇಕ್ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇಂದು ಬೆಳಗ್ಗೆ 9:30 ರಿಂದ 10:30 ವರೆಗೆ ನಡೆದ ಮಹರ್ತದಲ್ಲಿ ಅಭಿಷೇಕ್ ಮತ್ತು ಅವಿವಾ ಪತಿ-ಪತ್ನಿಯರಾದರು. ಅಭಿಷೇಕ್ ಮತ್ತು ಅವಿವಾ ಮದುವೆಗೆ ಅನೇಕ ಗಣ್ಯರು ಆಗಮಿಸಿದ್ದರು. ಕನ್ನಡ ಸಿನಿಮಾ ಗಣ್ಯರು ಮಾತ್ರವಲ್ಲದೇ ಪರಭಾಷೆಯ ತಾರೆಯರು ಆಗಮಿಸಿ ಶುಭಹಾರೈಸಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ಕೂಡ ಆಗಮಿಸಿ ನವಜೋಡಿಗೆ ಶುಭಹಾರೈಸಿದ್ದಾರೆ. ಬಿಳಿ ಪಂಚೆ ಮತ್ತು ಶರ್ಟ್ ಧರಿಸಿ ಮದುವೆಗೆ ಆಗಮಿಸಿದ್ದರು.