'ರಾಧೆ ಶ್ಯಾಮ್'ನಲ್ಲಿ ವಿಕ್ರಮಾದಿತ್ಯನಾದ ಡಾರ್ಲಿಂಗ್ ಪ್ರಭಾಸ್
ನೀನು ನನಗೆ ಗೊತ್ತು, ಆದರೆ ನಾನು ನಿನಗೆ ಹೇಳಲ್ಲ, ಯಾಕೆಂದರೆ ಅದು ನಿನಗೆ ಹೇಳಿದರೂ ಅರ್ಥ ಆಗಲ್ಲ. ನನ್ನ ಹೆಸರು ವಿಕ್ರಮಾದಿತ್ಯ. ನಾನು ದೇವರಲ್ಲ, ಆದರೆ ನಾನು ನಿಮ್ಮಲ್ಲೊಬ್ಬನು ಅಲ್ಲ ಎಂದು ಪ್ರಭಾಸ್ ಹೇಳಿದ್ದಾರೆ.
ಟಾಲಿವುಡ್ (Tollywood) ರೆಬೆಲ್ ಸ್ಟಾರ್ ಪ್ರಭಾಸ್ (Prabhas) ಅಭಿನಯದ ಬಹು ನಿರೀಕ್ಷಿತ ಚಿತ್ರ 'ರಾಧೆ ಶ್ಯಾಮ್' (Radhe Shyam) ಟೀಸರ್ ಬಿಡುಗಡೆಯಾಗಿದೆ. ಪ್ರಭಾಸ್ ಹುಟ್ಟುಹಬ್ಬಕ್ಕೆ ಚಿತ್ರತಂಡ ವಿಕ್ರಮಾದಿತ್ಯನ ಲುಕ್‌ನಲ್ಲಿ ಪ್ರಭಾಸ್ ಪರಿಚಯದ ಟೀಸರ್‌ನ್ನು (Teaser) ಬಿಡುಗಡೆ ಮಾಡಿದೆ. ಟೀಸರ್‌ನಲ್ಲಿ ಪ್ರಭಾಸ್ ವಿಕ್ರಮಾದಿತ್ಯನ (Vikramaditya) ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದು, ನನ್ನ ಹೆಸರು ವಿಕ್ರಮಾದಿತ್ಯ. ನಾನು ದೇವರಲ್ಲ, ಆದರೆ ನಾನು ನಿಮ್ಮಲ್ಲೊಬ್ಬನು ಅಲ್ಲ' ಎಂದು ಪ್ರಭಾಸ್ ಹಲವಾರು ಡೈಲಾಗ್‌ಗಳನ್ನು ಹೇಳಿದ್ದಾರೆ. ರೊಮ್ಯಾಂಟಿಕ್ ಕಥಾ ಹೊಂದಿರುವ ಈ ಚಿತ್ರದಲ್ಲಿ ಪ್ರಭಾಸ್‌ಗೆ ನಾಯಕಿಯಾಗಿ ಪೂಜಾ ಹೆಗ್ಡೆ (Pooja Hegde)ನಟಿಸಿದ್ದಾರೆ.
ಆದಿಪುರುಷನ ಸೆಟ್‌ನಿಂದ ಪ್ರಭಾಸ್, ಸನ್ನಿ ಸಿಂಗ್ ಲೇಟೆಸ್ಟ್ ಸೆಲ್ಫಿ!
ರಾಧಾ ಕೃಷ್ಣ ಕುಮಾರ್ (Radha Krishna Kumar) ನಿರ್ದೇಶನವಿರುವ ಈ ಚಿತ್ರಕ್ಕೆ ಭೂಷಣ್ ಕುಮಾರ್, ವಂಶಿ ಮತ್ತು ಪ್ರಮೋದ್ ನಿರ್ಮಾಣ ಮಾಡಿದ್ದಾರೆ. ಜಸ್ಟಿನ್ ಪ್ರಭಾಕರನ್ ಸಂಗೀತ ಸಂಯೋಜನೆ, ಮನೋಜ್ ಪರಮಹಂಸ ಛಾಯಾಗ್ರಹಣ ಮತ್ತು ಕೋಟಗಿರಿ ವೆಂಕಟೇಶ್ವರ ರಾವ್ ಸಂಕಲನ ಚಿತ್ರಕ್ಕಿದೆ. ಸಚಿನ್ ಖೇಡೇಕರ್, ಭಾಗ್ಯಶ್ರೀ, ಕುನಾಲ್ ರಾಯ್ ಕಪೂರ್, ಸತ್ಯನ್, ಪ್ರಿಯದರ್ಶಿ, ಮುರಳಿ ಶರ್ಮಾ, ಸಶಾ ಚೆಟ್ರಿ, ರಿದ್ಧಿ ಕುಮಾರ್ ಸೇರಿದಂತೆ ಇತರರು ಚಿತ್ರದ ತಾರಾಬಳಗದಲ್ಲಿದ್ದಾರೆ. 'ರಾಧೆ ಶ್ಯಾಮ್' ಚಿತ್ರವು 2022ರ ಜನವರಿ 14ರ ಸಂಕ್ರಾಂತಿ ಹಬ್ಬದಂದು ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಚಿತ್ರ ತೆರೆಗೆ ಬರಲಿದೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment