Rishab Shetty: ಹುಲಿ ವೇಷಧಾರಿಗಳ ಜೊತೆ ಮಸ್ತ್ ಡ್ಯಾನ್ಸ್ ಮಾಡಿದ ರಿಷಬ್ ಶೆಟ್ಟಿ
ನಟ ರಿಷಬ್ ಶೆಟ್ಟಿ ತಮ್ಮ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಹುಲಿ ವೇಷಧಾರಿಗಳ ಜೊತೆ ಮಸ್ತ್ ಆಗಿ ಹುಲಿ ಡ್ಯಾನ್ಸ್ ಮಾಡಿದ್ದಾರೆ.
ಬೆಂಗಳೂರು: ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಿಷಬ್ ಶೆಟ್ಟಿ( Rishab Shetty) ಅವರು ಅಭಿಮಾನಿಗಳ ಜತೆಗೆ ಶುಕ್ರವಾರ ತಮ್ಮ ಹುಟ್ಟುಹಬ್ಬವನ್ನು(Birthday) ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಬೆಂಗಳೂರಿನ ಹೊಸಕೆರೆಹಳ್ಳಿ ಬಳಿ ಇರುವ ನಂದಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಅಭಿಮಾನಿಗಳು ಸೇರಿದ್ದರು. ಡೊಳ್ಳು ಕುಣಿತ, ನೃತ್ಯ ಕಾರ್ಯಕ್ರಮ ಸೇರಿದಂತೆ ಹಲವು ಮನರಂಜನೆ ಕಾರ್ಯಕ್ರಮಗಳ ಜತೆಗೆ ಅಭಿಮಾನಿಗಳು ತಂದಿದ್ದ ಕೇಕ್ ಕತ್ತರಿಸಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಕಾರ್ಯಕ್ರಮದಲ್ಲಿ ಹುಲಿ ಕುಣಿತ, ಚೆಂಡೆ ಸದ್ದು ತುಂಬಾ ಜೋರಾಗಿ ಇತ್ತು. ಇನ್ನು ಉಡುಪಿಯಿಂದ ಬಂದ ಹುಲಿ ವೇಷಧಾರಿಗಳ ಜೊತೆ ರಿಷಬ್ ಹುಲಿ ಡಾನ್ಸ್ (tiger dance) ಮಾಡಿ ಸಂಭ್ರಮಿಸಿದರು. ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡ ‘ಕಾಂತಾರ’ (Kantara) ಚಿತ್ರದ ನಂತರ ರಿಷಬ್ ಶೆಟ್ಟಿ ಅವರನ್ನು ಅಭಿಮಾನಿಸುವವರ ಸಂಖ್ಯೆ ದೊಡ್ಡದಾಗಿದೆ.
ಇದನ್ನೂ ವೀಕ್ಷಿಸಿ: ಬಿಟ್ ಕಾಯಿನ್ ಹಗರಣ ಮರುತನಿಖೆ: ಅನುಮಾನಕ್ಕೆ ಕಾರಣವಾಯ್ತು ಸರ್ಕಾರದ ಆದೇಶ!