Upendra: ಏಪ್ರಿಲ್ 1ಕ್ಕೆ ಬೆಳ್ಳಿತೆರೆ ಮೇಲೆ ಬರಲಿದ್ದಾರೆ ಹೋಮ್‌ ಮಿನಿಸ್ಟರ್‌!

ಸ್ಯಾಂಡಲ್‌ವುಡ್‌ನ ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ ನಟಿಸಿರುವ, ಬಹು ನಿರೀಕ್ಷಿತ 'ಹೋಮ್ ಮಿನಿಸ್ಟರ್' ಚಿತ್ರ ಏಪ್ರಿಲ್‌‌ 1ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

Share this Video
  • FB
  • Linkdin
  • Whatsapp

ರಿಯಲ್ ಸ್ಟಾರ್ ಉಪೇಂದ್ರ (Upendra) ನಾಯಕರಾಗಿ ನಟಿಸಿರುವ, ಬಹು ನಿರೀಕ್ಷಿತ 'ಹೋಮ್ ಮಿನಿಸ್ಟರ್' (Home Minister) ಚಿತ್ರ ಏಪ್ರಿಲ್‌‌ 1ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. 'ಇದು ನಾನು ಈವರೆಗೂ ಮಾಡಿರದ ಪಾತ್ರ. ಇಲ್ಲಿನ ನಿರ್ಮಾಪಕರು (Producer) ‌ಬೇರೆ ಕಡೆ ಹೋಗಿ ಚಿತ್ರ ನಿರ್ಮಾಣ ಮಾಡುತ್ತಾರೆ. ಆದರೆ ತೆಲುಗಿನ ನಿರ್ಮಾಪಕರು ಕನ್ನಡದ ಮೇಲಿನ ಅಭಿಮಾನದಿಂದ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.‌ ಇನ್ನೂ ನೂರು ಜನ ತೆಲುಗಿನ ನಿರ್ಮಾಪಕರು ಬಂದು ಕನ್ನಡ ಚಿತ್ರ ನಿರ್ಮಾಣ ಮಾಡಬೇಕು. ಆ ರೀತಿಯಲ್ಲಿ 'ಹೋಂ ಮಿನಿಸ್ಟರ್' ಚಿತ್ರವನ್ನು ಯಶಸ್ವಿ ಮಾಡೋಣ ಎಂದು ಉಪೇಂದ್ರ ತಿಳಿಸಿದರು. ಜೊತೆಗೆ ನಾಯಕಿ ವೇದಿಕಾ ಅವರ ಅಭಿನಯವನ್ನು ಉಪೇಂದ್ರ ಮುಕ್ತಕಂಠದಿಂದ ಶ್ಲಾಘಿಸಿದರು.

ರಾಮ್‌ ಗೋಪಾಲ್‌ ವರ್ಮಾ ಜೊತೆ ಹೈದರಾಬಾದ್‌ನಲ್ಲಿ ಉಪೇಂದ್ರ ಏನ್ ಮಾಡ್ತಿದ್ದಾರೆ?

'ನನಗೆ ಬಹಳ ದಿನಗಳ ನಂತರ ನಿಮ್ಮ ಮುಂದೆ ಮಾತನಾಡಲು ಖುಷಿಯಾಗುತ್ತಿದೆ. ಸೂಪರ್ ಸ್ಟಾರ್ ಉಪೇಂದ್ರ ಅವರ ಜೊತೆ ನಟಿಸಿದ್ದು, ಹೆಚ್ಚಿನ ಖುಷಿ ತಂದಿದೆ. ಇಡೀ ಚಿತ್ರತಂಡದ ಪರಿಶ್ರಮದಿಂದ ಚಿತ್ರ ಚೆನ್ನಾಗಿ ಬಂದಿದೆ. ನಾನು ಜರ್ನಲಿಸ್ಟ್ ಪಾತ್ರ ಮಾಡಿದ್ದೇನೆ' ಎಂದರು ವೇದಿಕ (Vedhika). ಸುಜಯ್ ಕೆ ಶ್ರೀಹರಿ (Sujay K Srihari) ನಿರ್ದೇಶನದ ಈ ಚಿತ್ರಕ್ಕೆ ಜಿಬ್ರಾನ್ ಸಂಗೀತ ನೀಡಿದ್ದಾರೆ. ಕುಂಟುನಿ ಎಸ್ ಕುಮಾರ್ ಛಾಯಾಗ್ರಹಣ ಹಾಗೂ ಅಂಟೋನಿ ಅವರ ಸಂಕಲನ ಈ ಚಿತ್ರಕ್ಕಿದೆ. ಸುಮನ್ ರಂಗನಾಥ್, ತಾನ್ಯ ಹೋಪ್, ಸಾಧುಕೋಕಿಲ, ಅವಿನಾಶ್, ಮಾಳವಿಕ ಅವಿನಾಶ್, ತಿಲಕರು, ಲಾಸ್ಯ, ಸುಧಾ ಬೆಳವಾಡಿ, ಶ್ರೀನಿವಾಸ ಮೂರ್ತಿ, ವಿಜಯ್ ಚಂಡೂರ್, ಬೇಬಿ ಆದ್ಯ ಚಿತ್ರದ ತಾರಾಬಳಗದಲ್ಲಿದ್ದಾರೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

Related Video