Asianet Suvarna News Asianet Suvarna News

Jerusha : ವೀರ ಮದಕರಿ ಬಾಲನಟಿ ಈಗ ನಾಯಕಿ..! ಸ್ಮೈಲ್ ಗುರು ರಕ್ಷಿತ್‌ಗೆ ಜೋಡಿಯಾದ ಜೆರುಶಾ!

ಕಿಚ್ಚ ಸುದೀಪ್‌ಗೆ ಮಗಳಾಗಿ ನಟಿಸಿದ್ದ ಜೆರುಶಾ!
ಮಹೇಶ್ ಬಾಬು ಹೊಸ ಸಿನಿಮಾದಲ್ಲಿ ಜೆರುಶಾ!
ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್(Sudeep) ನಟನೆಯ ವೀರ ಮದಕರಿ(Veera Madakari) ಸಿನಿಮಾ ನೀವೆಲ್ಲಾ ನೋಡಿದ್ದೀರಾ. ಈ ಸಿನಿಮಾ ಕಿಚ್ಚನ ಕರಿಯರ್‌ನ ಬ್ಲಾಕ್ ಬಸ್ಟರ್ ಸಿನಿಮಾವಾಗಿದೆ. 2009ರಲ್ಲಿ  ಬಂದ ಈ ಮೂವಿ ಅಂದು ಹೆಚ್ಚು ಕಮ್ಮಿ 15 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿತ್ತು. ಈ ಸಿನಿಮಾದಲ್ಲಿ ಕಿಚ್ಚನ ಮುದ್ದಿನ ಮಗಳಾಗಿ ಜೆರುಶಾ(Jerusha) ಎಲ್ಲರ ಮನ ಗೆದ್ದಿದ್ಲು. ಈ ಬಾಲ ನಟಿ ಈಗ ಬೆಳೆದು ದೊಡ್ಡವಳಾಗಿದ್ದು, ಬಣ್ಣದ ಲೋಕದಲ್ಲಿ ಹೊಸ ಜರ್ನಿ ಶುರು ಮಾಡಿದ್ದಾರೆ. ಜೆರುಶಾ ಈಗ ನಾಯಕಿಯಾಗಿ ಚಿತ್ರರಂಗ ಪ್ರವೇಶ ಮಾಡುತ್ತಿದ್ದಾರೆ. ಮಹೇಶ್ ಬಾಬು ಕನ್ನಡ ಚಿತ್ರರಂಗದ ಸ್ಟಾರ್ ನಿರ್ದೇಶಕ. ಆಕಾಶ್, ಅರಸು, ಪರಮೇಶ ಪಾನ್ ವಾಲ ಮುಂತಾದ ಸ್ಟಾರ್ ಸಿನಿಮಾಗಳನ್ನು ಮಾಡಿರುವ ಅವರು, ಈಗ ಮತ್ತೊಂದು ಹೊಸ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಸ್ಮೈಲ್ ಗುರು ರಕ್ಷಿತ್ ನಾಯಕನಾಗಿ ನಟಿಸುತ್ತಿರೋ ಸಿನಿಮಾಗೆ ಮಹೇಶ್ ಬಾಬು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರದ ಮೂಲಕ ಜೆರುಶಾರನ್ನು ನಾಯಕಿಯಾಗಿ ಲಾಂಚ್ ಮಾಡುತ್ತಿದ್ದಾರೆ. ಅಂದಹಾಗೇ ಮಹೇಶ್ ಬಾಬು ಹೊಸ ಕಥೆಗೆ ಸದ್ಯ ಶೀರ್ಷಿಕೆ ಫೈನಲ್ ಆಗಿಲ್ಲ. ಯೂತ್‌ಫುಲ್ ಎಂಟರ್ ಟೈನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಚೇತನ್ ಮತ್ತು ಅನುರಾಗ್ ಬಂಡವಾಳ ಹೂಡಲಿದ್ದಾರೆ.

ಇದನ್ನೂ ವೀಕ್ಷಿಸಿ:  Lok Sabha elections 2024: ಯದುವೀರ್‌ VS ಎಂ.ಲಕ್ಷ್ಮಣ್‌: ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲೋದ್ಯಾರು ?