
ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನ: ಸಂತಾಪ ಸೂಚಿಸಿದ ಸಚಿವ ದಿನೇಶ್ ಗುಂಡೂರಾವ್
ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಸಾವಿಗೆ ಸಚಿವ ದಿನೇಶ್ ಗುಂಡೂರಾವ್ ಸಂತಾಪ ಸೂಚಿಸಿದ್ದಾರೆ.
ಸ್ಯಾಂಡಲ್‌ವುಡ್ ನಟ ವಿಜಯರಾಘವೇಂದ್ರ(actor vijay raghavendra) ಪತ್ನಿ ಸ್ಪಂದನಾ(spandana) ಅವರು ಹೃದಯಾಘಾತದಿಂಧ ನಿಧನರಾಗಿದ್ದಾರೆ. ಸ್ನೇಹಿತರು ಮತ್ತು ಕುಟುಂಬದವರ ಜೊತೆ ಬ್ಯಾಂಕಾಕ್‌ಗೆ ತೆರಳಿದ್ದಾಗ ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಪಂದನಾ ನಿಧನಕ್ಕೆ ಸಚಿವ ದಿನೇಶ್ ಗುಂಡೂರಾವ್ ( Dinesh Gundu Rao) ಸಂತಾಪ ಸೂಚಿಸಿದ್ದಾರೆ. ನಟ ವಿಜಯ ರಾಘವೇಂದ್ರರವರ ಧರ್ಮಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನರಾದ ಸುದ್ದಿ ಕೇಳಿ ಆಘಾತವಾಗಿದೆ. ಅತಿ ಸಣ್ಣ ವಯಸ್ಸಿಗೆ ಆಗುವ ಹೃದಯಾಘಾತದ ದುರ್ಘಟನೆಗಳು ನನ್ನ ಮನಸ್ಸನ್ನು ವಿಚಲಿತಗೊಳಿಸಿವೆ. ಸ್ಪಂದನಾರವರ ಸಾವು ಅನಿರೀಕ್ಷಿತ. ವಿಜಯ್ ರಾಘವೇಂದ್ರ ಕುಟುಂಬದ ಶೋಕದಲ್ಲಿ ನಾನೂ ಭಾಗಿಯಾಗಿರುತ್ತೇನೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ವೀಕ್ಷಿಸಿ: RIP Spandana Vijay: ಸ್ಪಂದನಾ ನಿಧನಕ್ಕೆ ಗಣ್ಯರ ಸಂತಾಪ, ಥಾಯ್ಲೆಂಡ್‌ನಲ್ಲಿ ಮರಣೋತ್ತರ ಪರೀಕ್ಷೆ