Asianet Suvarna News Asianet Suvarna News

ಕರ್ನಾಟಕದ ಏಳು ಅದ್ಭುತಗಳ ಪಟ್ಟಿಯಲ್ಲಿ ನೈಸರ್ಗಿಕ ಅದ್ಭುತ ನೆಲ ಜೋಗ ಜಲಪಾತ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಜೋಗಎಂಬಲ್ಲಿ  ಧುಮ್ಮಿಕ್ಕುವ ಶರವಾತಿ ನದಿ  ಏಳು ಅದ್ಭುತಗಳಲ್ಲಿ ಒಂದು ಎಂದು ಅಧಿಕೃತ ಮಾನ್ಯತೆ ಹೊಂದಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.
 

ಭಾರತದ ಬೃಹತ್ ಜಲಪಾತಗಳಲ್ಲಿ ಜೋಗ ಜಲಪಾತ ಅಗ್ರ ಪಂಕ್ತಿಯಲ್ಲಿ ನಿಲ್ಲುತ್ತದೆ. 830 ಅಡಿ ಎತ್ತರದಿಂದ ಧುಮುಕುವ ಜೋಗ ಜಲಪಾತ ಮಳೆಗಾಲದಲ್ಲಂತೂ ನೀರಿನಿಂದ ತುಂಬಿ ರಾಜಗಾಂಭೀರ್ಯವನ್ನು ಪಡೆಯುತ್ತದೆ. ಲಕ್ಷಾಂತರ ಪ್ರವಾಸಿಗರನ್ನು ಸೆಳೆಯುವ ಜೋಗ ಕರ್ನಾಟಕ ಪ್ರವಾಸೋದ್ಯಮದ ಅತ್ಯಂತ ಪ್ರಮುಖ ಆಕರ್ಷಣೆಯಲ್ಲಿ ಒಂದು, ಕರ್ನಾಟಕದ 7 ಅದ್ಭುತಗಳಲ್ಲಿ ಒಂದಾಗಿ ಇದು ಆಯ್ಕೆಯಾಗಲು ಇವಿಷ್ಟೇ ಕಾರಣವಲ್ಲ, ಜೀವವೈವಿಧ್ಯಗಳಿಂದ ಶ್ರೀಮಂತವಾಗಿರುವ ಪಶ್ಚಿಮ ಘಟ್ಟಗಳು ಭೂಮಿಯ ಅತಿ ಅಪರೂಪದ ಕಾಡುಗಳಲ್ಲಿ ಒಂದು. ಅಂತಹ ಅದ್ಭುತ ನಿಸರ್ಗದಲ್ಲಿರುವ ಜೋಗದ ಪರಿಸರಲ್ಲಿ ಕರ್ನಾಟಕದ ಅಪರೂಪದ ಸಸ್ಯ ಹಾಗೂ ಪ್ರಾಣಿಸಂಕುಲಗಳೂ ಇವೆ. ಶೋಲಾ ಕಾಡುಗಳಿಂದ ಹಿಡಿದು ದಟ್ಟ ನಿತ್ಯ ಹರಿದ್ವರ್ಣ ಕಾಡುಗಳವರೆಗೆ ಕರ್ನಾಟಕದಲ್ಲಿ 6 ವೈವಿಧ್ಯ ಕಾಡುಗಳಿವೆ. ನಾಗರಹೊಳೆ, ದಾಂಡೇಲಿಯಂಥ ಹುಲಿ ಸಂರಕ್ಷಿತ ಅಭಯಾರಣ್ಯಗಳಿವೆ. 

Video Top Stories