Asianet Suvarna News Asianet Suvarna News

ಕೆಪಿಎಲ್ ಕಿಕ್ ಹೆಚ್ಚಿಸಲು ರೆಡಿಯಾದ ರಾಗಿಣಿ-ಚಂದನ್ ಶೆಟ್ಟಿ..!

Aug 16, 2019, 1:18 PM IST

ಕನ್ನಡಿಗರ ಕ್ರಿಕೆಟ್ ಹಬ್ಬ, ಕರ್ನಾಟಕ ಪ್ರೀಮಿಯರ್ ಲೀಗ್ ಟೂರ್ನಿಯ ಉದ್ಘಾಟನಾ ಪಂದ್ಯಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಮೈದಾನ ಸಾಕ್ಷಿಯಾಗಲಿದೆ. 8ನೇ ಆವೃತ್ತಿಯ ಚುಟುಕು ಕ್ರಿಕೆಟ್ ಪಂದ್ಯಕ್ಕೂ ಮುನ್ನ ರ‍್ಯಾಪರ್ ಚಂದನ್ ಶೆಟ್ಟಿ, ಕೆಪಿಎಲ್ ಬ್ರ್ಯಾಂಡ್ ಅಂಬಾಸಿಡರ್ ರಾಗಿಣಿ ದ್ವಿವೇದಿ ಉದ್ಘಾಟನಾ ಸಮಾರಂಭಕ್ಕೆ ಇನ್ನಷ್ಟು ಮೆರಗು ನೀಡಲಿದ್ದಾರೆ. ಇದರ ಜತೆ ಕರ್ನಾಟ    ಕದ ಹೆಮ್ಮೆಯ ಕ್ರಿಕೆಟಿಗ ಗುಂಡಪ್ಪ ವಿಶ್ವನಾಥ್ ಮುಖ್ಯ ಅತಿಥಿಯಾಗಿ ಕಾಣಿಸಿಕೊಳ್ಳಲಿದ್ದಾರೆ. 
8ನೇ ಆವೃತ್ತಿಯಲ್ಲಿ 7 ತಂಡಗಳು ಪ್ರಶಸ್ತಿಗಾಗಿ ಕಾದಾಡಲಿದ್ದು, ಬೆಂಗಳೂರು ಹಾಗೂ ಮೈಸೂರಿನಲ್ಲಿ ಪಂದ್ಯಗಳು ಜರುಗಲಿವೆ. 17 ದಿನ ಒಟ್ಟು 25 ಪಂದ್ಯಗಳಲ್ಲಿ ಯಾರು ಚಾಂಪಿಯನ್ ಆಗಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.