ಗೆಲುವಿನ ಬೆನ್ನಲ್ಲೇ ಟೀಂ ಇಂಡಿಯಾಗೆ ಶಾಕ್: ಬುಮ್ರಾ ಬಳಿಕ ಮತ್ತೊಬ್ಬ ಸ್ಟಾರ್ ಆಟಗಾರ ಔಟ್..?

ಬುಮ್ರಾ ಅನುಪಸ್ಥಿತಿಯಲ್ಲಿ ಅಶ್ವಿನ್, ಶಮಿ ಹಾಗೂ ಜಡೇಜಾ ಮಿಂಚಿನ ಪ್ರದರ್ಶನ ತೋರುವ ಮೂಲಕ ಬುಮ್ರಾ ಸ್ಥಾನವನ್ನು ತುಂಬಿದ್ದರು. ಇದೆಲ್ಲದರ ನಡುವೆ ಭಾರತ ತಂಡದ ಸ್ಟಾರ್ ಆಲ್ರೌಂಡರ್ ಇನ್ನು ಕೆಲವು ತಿಂಗಳುಗಳ ಕಾಲ ಕ್ರಿಕೆಟ್ ನಿಂದ ದೂರ ಉಳಿಯುವ ಸಾಧ್ಯತೆಯಿದೆ.

First Published Oct 7, 2019, 6:19 PM IST | Last Updated Oct 7, 2019, 6:19 PM IST

ಬೆಂಗಳೂರು[ಅ.07]: ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಗೆದ್ದು ಬೀಗುತ್ತಿರುವ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ. ಈಗಾಗಲೇ ಟೆಸ್ಟ್ ಆರಂಭಕ್ಕೂ ಮುನ್ನ ಜಸ್ಪ್ರೀತ್ ಬುಮ್ರಾ ಬೆನ್ನು ನೋವಿನ ಸಮಸ್ಯೆಯಿಂದಾಗಿ ಭಾರತ ತಂಡದಿಂದ ಹೊರಬಿದ್ದಿದ್ದರು.

ಬುಮ್ರಾ ಅನುಪಸ್ಥಿತಿಯಲ್ಲಿ ಅಶ್ವಿನ್, ಶಮಿ ಹಾಗೂ ಜಡೇಜಾ ಮಿಂಚಿನ ಪ್ರದರ್ಶನ ತೋರುವ ಮೂಲಕ ಬುಮ್ರಾ ಸ್ಥಾನವನ್ನು ತುಂಬಿದ್ದರು. ಇದೆಲ್ಲದರ ನಡುವೆ ಭಾರತ ತಂಡದ ಸ್ಟಾರ್ ಆಲ್ರೌಂಡರ್ ಇನ್ನು ಕೆಲವು ತಿಂಗಳುಗಳ ಕಾಲ ಕ್ರಿಕೆಟ್ ನಿಂದ ದೂರ ಉಳಿಯುವ ಸಾಧ್ಯತೆಯಿದೆ.

ಬೆನ್ನಿನ ಜೊತೆಗೆ ಮೆದುಳಿಗೂ ಶಸ್ತ್ರಚಿಕಿತ್ಸೆ; ಹಾರ್ದಿಕ್ ಟ್ರೋಲ್ ಮಾಡಿದ ರಾಹುಲ್!

ಹೌದು ಟೀಂ ಇಂಡಿಯಾದ ಪ್ರಮುಖ ಆಲ್ರೌಂಡರ್ ಇದೀಗ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಅಷ್ಟಕ್ಕೂ ಯಾರು ಆ ಕ್ರಿಕೆಟಿಗ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ...