Asianet Suvarna News Asianet Suvarna News

Rojgar Mela: ಆಯ್ಕೆಯಾದ ಅಭ್ಯರ್ಥಿಗಳಿಗೆ ಸಚಿವ ರಾಜೀವ್ ಚಂದ್ರಶೇಖರ್ ನೇಮಕಾತಿ ಪತ್ರ ವಿತರಣೆ

ರೋಜ್‌ಗಾರ್ ಮೇಳದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಒಟ್ಟು 71,000 ಹೊಸ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಿಸಿದರು. ಬಳಿಕ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಬೆಂಗಳೂರಿನಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಆಯ್ಕೆಯಾದ ಹೊಸ ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು.

ಬೆಂಗಳೂರು (ಜ.20):  ರೋಜ್‌ಗಾರ್ ಮೇಳದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಒಟ್ಟು 71,000 ಹೊಸ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಿಸಿದರು. ಬಳಿಕ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಬೆಂಗಳೂರಿನಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಆಯ್ಕೆಯಾದ ಹೊಸ ಉದ್ಯೋಗಿಗಳಿಗೆ  ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು. ಇದರಲ್ಲಿ ಜೂನಿಯರ್ ಇಂಜಿನಿಯರ್, ಲೋಕೋ ಪೈಲೆಟ್ ಸೇರಿದಂತೆ ಹಲವು ಹುದ್ದೆಗಳಿವೆ.  ಬಳಿಕ ಮಾತನಾಡಿದ ರಾಜೀವ್ ಚಂದ್ರಶೇಖರ್  ಸರ್ಕಾರಿ ಉದ್ಯೋಗಗಳು ಕೇವಲ ಉದ್ಯೋಗವಲ್ಲ, ಆದರೆ ಜನಸೇವೆ ಮತ್ತು ದೇಶ ಸೇವೆಗೆ ಒಂದು ಅವಕಾಶವಾಗಿದೆ. ಸರ್ಕಾರದಲ್ಲಿ ವಿವಿಧ ಕ್ಷೇತ್ರಗಳಲ್ಲಿ 10 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಬದ್ಧತೆಗಾಗಿ ಪ್ರಧಾನಿಯನ್ನು ಶ್ಲಾಘಿಸಿದರು. ರೋಜ್‌ಗಾರ್ ಮೇಳಗಳು ಆ ಬದ್ಧತೆಯ ಈಡೇರಿಕೆಗೆ ಒಂದು ಹೆಜ್ಜೆಯಾಗಿದೆ ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಸಂಸದರು ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಸದಾನಂದ ಗೌಡರು ಉಪಸ್ಥಿತರಿದ್ದರು.

Video Top Stories