Karnataka Bandh: ನೈಟ್‌ ಕರ್ಫ್ಯೂಗೆ ಆಕ್ರೋಶ: ಕರ್ನಾಟಕ ಬಂದ್‌ಗೆ ವಿರೊಧ: ಡಿ. 31ರ ಕಥೆ ಏನು?

ಕನ್ನಡ ಪರ ಸಂಘಟನೆಗಳ ಡಿ.31ಕ್ಕೆ  ‘ಕರ್ನಾಟಕ ಬಂದ್‌’, ಒಮಿಕ್ರೋನ್‌ ಭೀತಿ ಹಿನ್ನೆಲೆಯಲ್ಲಿ ಸರ್ಕಾರದ ರಾತ್ರಿ ಕರ್ಫ್ಯೂ, ಡಿ. 31ರ ಕಥೆ ಏನು? 

Share this Video
  • FB
  • Linkdin
  • Whatsapp

ಬೆಂಗಳೂರು (ಡಿ. 30): ಎಂಇಎಸ್‌ (MES) ನಿಷೇಧಿಸಬೇಕೆಂದು ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಡಿ.31ಕ್ಕೆ ‘ಕರ್ನಾಟಕ ಬಂದ್‌’ ಕರೆ ನೀಡಿವೆ. ಆದರೆ ಎಂಇಎಸ್‌ ನಿಷೇಧಕ್ಕೆ ಆಗ್ರಹಿಸಿ ಕರೆ ನೀಡಲಾಗಿರುವ ಕರ್ನಾಟಕ ಬಂದ್‌ ಬಗ್ಗೆ ಕನ್ನಡಪರ ಸಂಘಟನೆಗಳಲ್ಲಿ ಒಮ್ಮತ ಇಲ್ಲ. ಈ ಮಧ್ಯೆ ಒಮಿಕ್ರೋನ್‌ ಭೀತಿ ಹಿನ್ನೆಲೆಯಲ್ಲಿ (Omicron Threat) ರಾಜ್ಯ ಸರ್ಕಾರ ವಿಧಿಸಿರುವ ರಾತ್ರಿ ಕರ್ಫ್ಯೂ (Night Curfew) ಮಂಗಳವಾರ 10 ಗಂಟೆಯಿಂದ ಜಾರಿಯಾಗಿದೆ. ಪ್ರತಿ ದಿನ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆವರೆಗೆ ವಾಣಿಜ್ಯ ಚಟುವಟಿಕೆ ಹಾಗೂ ಅನಗತ್ಯ ಸಂಚಾರಕ್ಕೆ ನಿರ್ಬಂಧ ಇರಲಿದೆ. ಜತೆಗೆ ಸಭೆ, ಸಮಾರಂಭ, ಸಮಾವೇಶ, ಮದುವೆ ಕಾರ್ಯಕ್ರಮಗಳಲ್ಲಿ 300ಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಎಂಬ ನಿಯಮವೂ ಅನ್ವಯವಾಗಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ಓದಿ: Ban on MES: ಕರ್ನಾಟಕ ಬಂದ್‌ ಕೈಬಿಡಿ ಎಂದ ಸಿಎಂ: ಮಾಡಿಯೇ ಸಿದ್ಧ: ವಾಟಾಳ್‌

ರಾತ್ರಿ ಕರ್ಫ್ಯೂ ಬಗ್ಗೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ, ಇನ್ನೂ ಕೆಲವರು ಹೊಸ ರೂಪಾಂತರಿ ಒಮಿಕ್ರೋನ್‌ ಭೀತಿ ಬೆನ್ನಲ್ಲೇ ಕೊರೋನಾ ಹರಡುವಿಕೆ ತಡೆಯಲು ಈ ಕ್ರಮ ಅತ್ಯಗತ್ಯ ಎಂದು ಹೇಳಿದ್ದಾರೆ. ಇನ್ನು ಎಂಇಎಸ್‌ ನಿಷೇಧಕ್ಕೆ ಆಗ್ರಹಿಸಿ ಕರೆ ನೀಡಲಾಗಿರುವ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಹೊಸ ವರ್ಷದ ಚಟುವಟಿಕೆಗಳಿಗೆ ಹೊಡೆತ ಬೀಳಲಿದೆ ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ.

Related Video