14 ದಿನ ಜನತಾ ಕರ್ಫ್ಯೂ, ಏನಿರತ್ತೆ, ಏನಿರಲ್ಲ..? ಕಂಪ್ಲೀಟ್ ಡಿಟೇಲ್ಸ್

ಕೋವಿಡ್‌ನ ಎರಡನೇ ಅಲೆಯ ತೀವ್ರತೆ ಗಂಭೀರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಒಳಗೊಂಡ ಎರಡು ವಾರಗಳ ಜನತಾ ಕರ್ಫ್ಯೂ ಜಾರಿಗೊಳಿಸಿ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ.

First Published Apr 27, 2021, 10:43 AM IST | Last Updated Apr 27, 2021, 10:43 AM IST

ಬೆಂಗಳೂರು (ಏ. 27): ಕೋವಿಡ್‌ನ ಎರಡನೇ ಅಲೆಯ ತೀವ್ರತೆ ಗಂಭೀರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಒಳಗೊಂಡ ಎರಡು ವಾರಗಳ ಜನತಾ ಕರ್ಫ್ಯೂ ಜಾರಿಗೊಳಿಸಿ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ.

ಅದರನ್ವಯ ಮಂಗಳವಾರ ರಾತ್ರಿ 9 ಗಂಟೆಯಿಂದ ಮೇ 12 ರ ಬೆಳಗ್ಗೆ 6 ಗಂಟೆವರೆಗೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಆರ್ಥಿಕ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಪ್ರತಿನಿತ್ಯ ಬೆಳಗ್ಗೆ 6 ಗಂಟೆಯಿಂದ 10ರವರೆಗೆ ಕೇವಲ 4 ಗಂಟೆಗಳ ಕಾಲ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಈ ವೇಳೆ ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಖರೀದಿಸಬಹುದಾಗಿದೆ. ಸಾರ್ವಜನಿಕ ಸಾರಿಗೆ ನಿರ್ಬಂಧಿಸಲಾಗಿದೆ. ಅನಿವಾರ‍್ಯ ಕಾರಣವಿದ್ದರೆ ಮಾತ್ರ ಸ್ವಂತ ವಾಹನದಲ್ಲಿ ತೆರಳಲು ಅವಕಾಶ ಕಲ್ಪಿಸಲಾಗಿದೆ.