Asianet Suvarna News Asianet Suvarna News

ಗ್ಯಾರಂಟಿ ಯೋಜನೆ ಎಫೆಕ್ಟ್: ಬಿಪಿಎಲ್‌ ಕಾರ್ಡ್‌ಗೆ 2.5 ಲಕ್ಷ ಅರ್ಜಿ!

ಕಾಂಗ್ರೆಸ್‌ ಸರ್ಕಾರ ಉಚಿತ ಕೊಡುಗೆಗಳನ್ನು ಜನರ ಮುಂದೆ ಇಟ್ಟಿದೆ. ಹೀಗಾಗಿ ಸಾರ್ವಜನಿಕರು ಬಿಪಿಎಲ್‌ ಕಾರ್ಡ್‌ಗಳನ್ನು ಮಾಡಿಸಿಕೊಳ್ಳಲು ನಾ ಮುಂದು ತಾ ಮುಂದು ಎಂದು ಮುಗಿಬಿದ್ದಿದ್ದಾರೆ

ಕಾಂಗ್ರೆಸ್‌ ಸರ್ಕಾರ ಉಚಿತ ಕೊಡುಗೆಗಳನ್ನು ಜನರ ಮುಂದೆ ಇಟ್ಟಿದೆ. ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ, ಪ್ರತಿ ಮನೆಗೂ 200 ಯೂನಿಟ್‌ ಉಚಿತ ವಿದ್ಯುತ್‌, ಮನೆಯ ಯಜಮಾನಿಗೆ ಪ್ರತಿ ತಿಂಗಳು 2000 ರೂ. ಪ್ರತಿ ವ್ಯಕ್ತಿಗೆ 10 ಕಿಲೋ ಅಕ್ಕಿ ಉಚಿತ. ಹೀಗೆ 5 ಗ್ಯಾರಂಟಿಗಳನ್ನು ಕಾಂಗ್ರೆಸ್‌ ನೀಡಿದೆ. ಹೀಗಾಗಿ ಸಾರ್ವಜನಿಕರು ಬಿಪಿಎಲ್‌ ಕಾರ್ಡ್‌ಗಳನ್ನು ಮಾಡಿಸಿಕೊಳ್ಳಲು ನಾ ಮುಂದು ತಾ ಮುಂದು ಎಂದು ಮುಗಿಬಿದ್ದಿದ್ದಾರೆ  2.5 ಲಕ್ಷ ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಹೇಳಲಾಗಿದೆ.  ಸಮಸ್ಯೆಯನ್ನು ಮನಗಂಡ ಆಹಾರ ಇಲಾಖೆಯವರು ಹೊಸ ಪಡಿತರ ಚೀಟಿ ಪ್ರಕ್ರೀಯೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದಾರೆ.